ನ್ಯೂಸ್ ನಾಟೌಟ್: ಸಿಎಂ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಸ್ವಯಂಪ್ರೇರಿತ ಪ್ರಕರಣ (ಸುಮೊಟೋ ಕೇಸ್) ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಿದ್ರಾಮುಲ್ಲಾ ಖಾನ್ ಎಂದಿದ್ದಕ್ಕೆ ಕೇಸ್ ದಾಖಲಿಸಿದ್ದು, ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದಲ್ಲಿ ಫೆ.23ರಂದು ಕಾರ್ಯಕರ್ತರ ಸಭೆಯಲ್ಲಿ ಭಾಷಣ ಮಾಡುವ ವೇಳೆ ಸಿಎಂ ಸಿದ್ದರಾಮಯ್ಯಗೆ ಸಿದ್ರಾಮುಲ್ಲಾ ಖಾನ್ ಎಂಬ ಪದ ಬಳಕೆ ಮಾಡಿದ್ದರು. ಈ ಹಿನ್ನೆಲೆ ಮುಂಡಗೋಡ ಪೊಲೀಸರು ಸುಮೊಟೊ ಪ್ರಕರಣ (Sumoto Case) ದಾಖಲಿಸಿಕೊಂಡಿದ್ದಾರೆ. ನಮ್ಮ ತೆರಿಗೆ ನಮ್ಮ ಹಕ್ಕು ಹೋರಾಟಕ್ಕೆ ತಿರುಗೇಟು ನೀಡುವ ಭರದಲ್ಲಿ ಸಂಸದ ಅನಂತ್ ಕುಮಾರ್ ಹೆಗಡೆ, ದೇಶದಲ್ಲಿ 99.9% ಹಿಂದೂಗಳು ತೆರಿಗೆ ಕಟ್ಟುತ್ತಾರೆ.
ಆದರೆ ಮುಸ್ಲಿಮರ ಮಸೀದಿಗೆ ಯಾಕೆ ಅನುದಾನ ಕೊಟ್ರಿ? ಸಿದ್ರಾಮುಲ್ಲಾ ಖಾನ್ ಸರ್ಕಾರ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದೆ. ರಾಜ್ಯದಲ್ಲಿ ಸಿದ್ರಮುಲ್ಲಾ ಖಾನ್ ಸರ್ಕಾರ ಇದೆ ಎಂದು ವಾಗ್ದಾಳಿ ನಡೆಸಿದ್ದರು ಎನ್ನಲಾಗಿದೆ. ಪಂಜಾಬ್ ರೈತರು ಟೆರರಿಸ್ಟ್ಗಳು ಎಂಬ ಅನಂತ್ ಕುಮಾರ್ ಹೆಗಡೆ ಹೇಳಿಕೆ ವಿಚಾರವಾಗಿ ಮಾತನಾಡಿದ ಸಚಿವ ಶಿವಾನಂದ ಪಾಟೀಲ್, ಅನಂತ್ ಕುಮಾರ್ ಹೆಗಡೆ ಏನಾದರೂ ಅಲ್ಲಿಗೆ ಹೋಗಿ ನೋಡಿದ್ದಾರಾ? ಅವರು ಟೆರ್ರಿಸ್ಟ್ಗಳಾದರೆ ಕೇಂದ್ರ ಸಚಿವರು ಯಾಕೆ ಅವರ ಜೊತೆ ಸಭೆ ನಡೆಸಿದರು? ಆರಾರು ಮಂದಿ ಕೇಂದ್ರ ಸಚಿವರು ಮೂರ್ಮೂರು ಸಭೆ ಯಾಕೆ ಮಾಡಿದರು ಎಂದರಲ್ಲದೆ, ಇತ್ತೀಚೆಗೆ ಹೆಗಡೆ ಯಾಕೆ ಇತರ ಮಾತಾಡುತ್ತಿದ್ದಾರೋ ಎಂದು ಪ್ರಶ್ನಿಸಿದರು.