ನ್ಯೂಸ್ ನಾಟೌಟ್ : ಇತ್ತೀಚೆಗೆ ಹ್ಯಾಕರ್ಸ್ಗಳ ಹಾವಳಿ ಜೋರಾಗಿದೆ.ಎಷ್ಟೇ ಕಡಿವಾಣ ಹಾಕಲೆತ್ನಿಸಿದರೂ ಇದನ್ನು ಮಟ್ಟ ಹಾಕಲಾಗುತ್ತಿಲ್ಲ.ಇದೀಗ ಬಿಜೆಪಿಯ ಹಿರಿಯ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish Shettar) ಅವರ ಫೇಸ್ಬುಕ್ (Facebook) ಖಾತೆಯನ್ನು ದುಷ್ಕರ್ಮಿಗಳು ಹ್ಯಾಕ್ ಮಾಡಿದ್ದಾರೆ. ಖಾತೆಗೆ 7.50 ಲಕ್ಷ ಹಣ ಬಂದಿದ್ದು, ನಾನು ಮಾಡಿದ ವ್ಯವಹಾರದಲ್ಲಿ ಆರಂಭದಲ್ಲೇ ಲಾಭ ಬಂದಿದೆ. ನೀವು ಸಹ ವ್ಯವಹಾರ ನಡೆಸಿ ಲಾಭ ಮಾಡಿಕೊಳ್ಳಿ ಎಂದು ಪೋಸ್ಟ್ ಮಾಡಲಾಗಿದೆ.
ಇವಿಷ್ಟು ಮಾತ್ರವಲ್ಲದೇ ಕ್ರಿಸ್ಟಿನಾ ಪೆನಾಟೆ ಎಂಬುವರ ಸಲಹೆ ಪಡೆಯಬಹುದು ಎಂದು ಪೋಸ್ಟ್ನಲ್ಲಿ ಬರೆಯಲಾಗಿದೆ. ತಂದೆಯ ಫೇಸ್ಬುಕ್ ಖಾತೆ ಹ್ಯಾಕ್ ಆಗಿರುವ ಮಾಹಿತಿ ನೀಡಿದ ಪುತ್ರ ಸಂಕಲ್ಪ ಶೆಟ್ಟರ್, ಯಾರೂ ಕೂಡ ಹಣ ಹಾಕಬಾರದು ಎಂದು ನೆಟ್ಟಿಗರಿಗೆ ಮನವಿ ಮಾಡಿದ್ದಾರೆ.
ಉತ್ತರ ಕರ್ನಾಟಕದ ಲಿಂಗಾಯತ ಪ್ರಭಾವಿ ನಾಯಕ ನಾಯಕ ಜಗದೀಶ್ ಶೆಟ್ಟರ್ ಅವರು ವಿಧಾನಸಭೆ ಚುನಾವಣೆಗೂ ಮುನ್ನ ಸ್ವಾಭಿಮಾನಕ್ಕೆ ಧಕ್ಕೆಯಾಯ್ತು ಎಂದು ತತ್ವಸಿದ್ಧಾಂತಗಳನ್ನು ಬಿದಿಗಿಟ್ಟು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಕಾಂಗ್ರೆಸ್ನಿಂದ ಟಿಕೆಟ್ ಪಡೆದು ಚುನಾವಣೆಯಲ್ಲಿ ಸ್ಪರ್ಧಿಸಿ ಬಿಜೆಪಿ ವಿರುದ್ಧವೇ ಸೋಲು ಅನುಭವಿಸಿದ್ದರು. ಬಳಿಕ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿ ಎಂಎಲ್ಸಿ ಆಗಿದ್ದರು.ಒಟ್ಟಾರೆಯಾಗಿ ಎಂಟು ತಿಂಗಳು ಕಾಂಗ್ರೆಸ್ನಲ್ಲಿದ್ದ ಶೆಟ್ಟರ್ ಕಳೆದ ತಿಂಗಳಷ್ಟೇ ಬಿಜೆಪಿಗೆ ಘರ್ವಾಪ್ಸಿ ಆಗಿದ್ದಾರೆ.