ನ್ಯೂಸ್ ನಾಟೌಟ್ : ವಿಧಾನಸೌಧಕ್ಕೆ ಆಗಮಿಸುತ್ತಿದ್ದಾಗ ಅನಾರೋಗ್ಯ ಕಾಣಿಸಿಕೊಂಡ ಕಾರಣ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಅನಾರೋಗ್ಯ ಹಿನ್ನೆಲೆ ಇಂದಿನ ಕಲಾಪಕ್ಕೂ ಕುಮಾರಸ್ವಾಮಿ ಗೈರಾಗಿದ್ದರು ಎನ್ನಲಾಗಿದೆ. ಇಂದು ಬೆಳಗ್ಗೆ ಕಲಾಪದಲ್ಲಿ ಭಾಗಿಯಾಗಲಯ ಆಗಮಿಸಿದ್ದ ವೇಳೆ ಅನಾರೋಗ್ಯ ಕಾಣಿಸಿಕೊಂಡಿದೆ ಎಂದು ವರದಿ ತಿಳಿಸಿದೆ. ವಿಧಾನಸೌಧದಿಂದ ನೇರವಾಗಿ ಜಯನಗರದ ಅಪೋಲೋ ಆಸ್ಪತ್ರೆಗೆ ತೆರಳಿ ದಾಖಲಾಗಿದ್ದಾರೆ. ಕುಮಾರಸ್ವಾಮಿ ಗಂಟಲು ನೋವಿನಿಂದ ಬಳಲುತ್ತಿದ್ದಾರೆ ಎಂದು ವರದಿ ತಿಳಿಸಿದೆ.
ಕಳೆದೊಂದು ವಾರದಿಂದ ಕುಮಾರಸ್ವಾಮಿ ಗಂಟಲು ಇನ್ಫೆಕ್ಷನ್ ನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮಾಜಿ ಮುಖ್ಯಮಂತ್ರಿಗಳು ಮಂಗಳವಾರ(ಪೆ.27) ರಾಜ್ಯಸಭಾ ಚುನಾವಣೆಯಲ್ಲಿ ಭಾಗವಹಿಸಿದ್ದರು.
ತಮ್ಮ ಪಕ್ಷದ ಎಲ್ಲಾ ಮತಗಳನ್ನು ಹಿಡಿದಿಟ್ಟುಕೊಳ್ಳುವಲ್ಲಿ ಹೆಚ್ಡಿ ಕುಮಾರಸ್ವಾಮಿ ಯಶಸ್ವಿಯಾಗಿದ್ದರು. ಜೆಡಿಎಸ್ನಿಂದ ಮೈತ್ರಿ ಪಕ್ಷವಾದ ಬಿಜೆಪಿಯ ಬೆಂಬಲ ಪಡೆದು ಕುಪೇಂದ್ರ ರೆಡ್ಡಿ ಐದನೇ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಆದ್ರೆ ಪಕ್ಷೇತರರ ಬೆಂಬಲ ಸಿಗದ ಹಿನ್ನೆಲೆ ಮತ್ತು ಎಸ್ಟಿ ಸೋಮಶೇಖರ್ ಅಡ್ಡಮತದಾನ, ಶಿವರಾಂ ಹೆಬ್ಬಾರ್ ಗೈರು ಸೇರಿದಂತೆ ಹಲವು ಕಾರಣಗಳಿಂದ ಕುಪೇಂದ್ರ ರೆಡ್ಡಿ ಸೋಲಬೇಕಾಯ್ತು. ಕಳೆದ ವರ್ಷವೂ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಹೆಚ್ಡಿ ಕುಮಾರಸ್ವಾಮಿ ರಾತ್ರೋರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗಿದೆ.