ನ್ಯೂಸ್ ನಾಟೌಟ್: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿ ಕೂಡ ಒಂದು.ಹೆಚ್ಚಿನ ಮಂದಿ ಇದರ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಈ ಬೆನ್ನಲ್ಲೇ ಇದೀಗ ರಾಜ್ಯದ ವಿದ್ಯುತ್ ಗ್ರಾಹಕರಿಗೆ ರಾಜ್ಯ ಸರ್ಕಾರ ಮತ್ತೊಂದು ಸಿಹಿ ಸುದ್ದಿ ನೀಡಿದೆ.ಸರಾಸರಿ 100 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಸುವ ಗ್ರಾಹಕರ ಮೇಲೆ ವಿಧಿಸಲಾಗುವ ವಿದ್ಯುತ್ ದರವನ್ನು ಇಳಿಕೆ ಮಾಡಲಾಗಿದೆ ಎನ್ನುವ ಸಂತಸದ ವಿಚಾರ ಹೊರಬಿದ್ದಿದೆ. ಇಂಥ ಗ್ರಾಹಕರು ಬಳಸುವ ವಿದ್ಯುತ್ತಿನ ಪ್ರತಿ ಯೂನಿಟ್ ಮೇಲೆ 1 ರೂ. 10 ಪೈಸೆಯನ್ನು ಇಳಿಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಇನ್ನು 100 ಯೂನಿಟ್ ಗಿಂತಲೂ ಹೆಚ್ಚು ವಾಣಿಜ್ಯ ಬಳಕೆದಾರರಿಗೆ ಪ್ರತಿ ಯೂನಿಟ್ ಮೇಲೆ 1 ರೂ. 25 ಪೈಸೆಯಷ್ಟು ಕಡಿಮೆ ಮಾಡಲಾಗಿದೆ ಎಂದು ಹೇಳಲಾಗಿದೆ.ಆಸ್ಪತ್ರೆ ಹಾಗೂ ಶಿಕ್ಷಣ ಸಂಸ್ಥೆಗಳಿಗೆ ವಿಧಿಸಲಾಗುವ ವಿದ್ಯುತ್ ಮೇಲೆ ಪ್ರತಿ ಯೂನಿಟ್ ಗೆ 40 ಪೈಸೆ ಕಡಿಮೆ ಮಾಡಲಾಗಿದ್ದು, ಖಾಸಗಿ ಏತ ನೀರಾವರಿ ಬಳಕೆದಾರರಿಗೆ 2 ರೂಪಾಯಿ ಇಳಿಕೆ ಮಾಡಲಾಗಿದೆ. 100 ಯೂನಿಟ್ ಹೆಚ್ಚು ಬಳಸುವವರಿಗೆ ಮಾತ್ರ ಹೊಸ ದರ ಮಾರ್ಚ್ 1ರಿಂದಲೇ ಅನ್ವಯವಾಗುತ್ತದೆ.
- ಹೆಚ್ ಟಿ (ಕಮರ್ಷಿಯಲ್) – ಪ್ರತಿ ಯೂನಿಟ್ 1 ರೂ. 25 ಪೈಸೆ.
- ಹೆಚ್ ಟಿ ಇಂಡಸ್ಟ್ರಿಯಲ್ – ಪ್ರತಿ ಯೂನಿಟ್ ಗೆ 50 ಪೈಸೆ ಇಳಿಕೆ.
- ಹೆಚ್ ಟಿ ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳು – ಪ್ರತಿ ಯೂನಿಟ್ ಗೆ 40 ಪೈಸೆ ಇಳಿಕೆ.
- ಎಲ್ ಟಿ ಡೊಮೆಸ್ಟಿಕ್ ಲೈಟಿಂಗ್ – 100 ಯೂನಿಟ್ ಗಿಂತ ಹೆಚ್ಚಿನ ಬಳಕೆಗಾಗಿ ಪ್ರತಿ ಯೂನಿಟ್ ಗೆ 110 ಪೈಸೆ ಕಡಿಮೆ.