ನ್ಯೂಸ್ ನಾಟೌಟ್: ವಿಧಾನಸಭಾ ಚುನಾವಣೆಯಲ್ಲಿ ಎಲ್ಲರ ಚಿತ್ತ ಪುತ್ತೂರಿತ್ತ ನೆಟ್ಟಿತ್ತು.ಇದಕ್ಕೆ ಕಾರಣ ಹಿಂದೂ ಹುಲಿ ಅರುಣ್ ಪುತ್ತಿಲ ಅವರು ಬಿಜೆಪಿ ತೊರೆದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು.ಆದರೆ ಕೆಲವೇ ಕೆಲವು ಮತಗಳ ಅಂತರದಿಂದ ಸೋಲನ್ನು ಕಂಡರೂ ಇದೀಗ ಮತ್ತೆ ಅದೇ ಉತ್ಸಾಹದಲ್ಲಿ ಮುಂದಿನ ಲೋಕಸಭೆ ಚುನಾವಣೆಯಲ್ಲಿಯೂ ಸ್ಪರ್ಧೆ ಮಾಡುತ್ತಾರೆನ್ನುವ ಸುದ್ದಿ ಹರಿದಾಡಿತ್ತು.ಇದೀಗ ಬಹುತೇಕ ನಿಜವಾಗಿದೆ.
ಹೌದು, ಪುತ್ತೂರಿನ ಅರುಣ್ ಕುಮಾರ್ ಪುತ್ತಿಲ ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದು ಕೂಡ ಖಚಿತವಾಗಿದೆ. ಬಿಜೆಪಿ ನಾಯಕರೊಂದಿಗಿನ ಮಾತುಕತೆ ವಿಫಲವಾದ ಬೆನ್ನಲ್ಲೇ ಅರುಣ್ ಕುಮಾರ್ ಪುತ್ತಿಲ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ಪುತ್ತೂರಿನಲ್ಲಿ ಪುತ್ತಿಲ ಪರಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ ಎನ್ನಲಾಗಿದೆ.ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವ ಕುರಿತು ಸ್ಪಷ್ಟನೆ ನೀಡಿದ್ದಾರೆ.ಈ ಹಿಂದೆ ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಗೆ ಹಲವು ಸುತ್ತಿನ ಮಾತುಕತೆ ನಡೆದಿತ್ತು. ಅರುಣ್ ಕುಮಾರ್ ಪುತ್ತಿಲ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರನ್ನು ಭೇಟಿಯಾಗಿದ್ದರು. ಈ ವೇಳೆ ಬಿಜೆಪಿ ಪಕ್ಷಕ್ಕೆ ಹಲವು ಬೇಡಿಕೆ ಇಟ್ಟಿದ್ದರು. ಆದರೆ ಸಾಮಾನ್ಯ ಕಾರ್ಯಕರ್ತರಾಗಿ ಬಿಜೆಪಿ ಸೇರ್ಪಡೆಗೆ ಬಿಜೆಪಿಯ ಹಿರಿಯ ನಾಯಕರು ಸೂಚಿಸಿದ್ದರು ಎನ್ನಲಾಗಿದೆ. ಸದ್ಯ ಬಿಜೆಪಿ ಮುಖಂಡರ ಜೊತೆಗಿನ ಮಾತುಕತೆ ವಿಫಲವಾದ ಹಿನ್ನಲೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸಲು ಅರುಣ್ ಕುಮಾರ್ ಪುತ್ತಿಲ ನಿರ್ಧರಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.