ನ್ಯೂಸ್ ನಾಟೌಟ್ : ಮೂರು ಬೇರೆ ಬೇರೆ ವಂದೇ ಭಾರತ್ ರೈಲುಗಳ ಮೇಲೆ ಮಾರ್ಚ್ 3ರ ಭಾನುವಾರ ಬೆಂಗಳೂರಿನ ನೈಋತ್ಯ ರೈಲ್ವೆ ವಲಯದಲ್ಲಿ ಹಾದು ಹೋಗುತ್ತಿದ್ದ ವೇಳೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.
ಪ್ರಯಾಣಿಕರಿಗೆ ಯಾವುದೇ ಗಾಯಗಳಾಗದಿದ್ದರೂ ರೈಲಿನ ಕಿಟಕಿ ಗಾಜುಗಳಿಗೆ ಹಾನಿಯಾಗಿದೆ ಎಂದು ವರದಿ ತಿಳಿಸಿದೆ. ಪೊಲೀಸರು ವಿವಿಧ ಸ್ಥಳಗಳಿಗೆ ದಾಳಿ ನಡೆಸಿ ಮತ್ತು ತನಿಖೆ ನಡೆಸುತ್ತಿದ್ದಾರೆ. ಈವರೆಗೆ ಯಾವುದೇ ಬಂಧನವಾಗಿಲ್ಲ” ಎಂದು ಇನ್ಸ್ಪೆಕ್ಟರ್ ತಿಳಿಸಿದ್ದಾರೆ. ಕಲ್ಲು ತೂರಾಟ ವರದಿಯಾಗಿರುವ ಮೂರು ಘಟನೆಗಳಲ್ಲಿ ಎರಡು ಬೆಂಗಳೂರು ರೈಲ್ವೆ ವಿಭಾಗದ ವ್ಯಾಪ್ತಿಯಲ್ಲಿ ಸಂಭವಿಸಿವೆ.
ಮಾರ್ಚ್ 3ರ ಬೆಳಗ್ಗೆ 6.15ಕ್ಕೆ ಕೆಎಸ್ಆರ್ ಬೆಂಗಳೂರು – ಧಾರವಾಡ ವಂದೇ ಭಾರತ್ ಎಕ್ಸ್ಪ್ರೆಸ್ (ರೈಲು ಸಂಖ್ಯೆ 20661) ಬೆಂಗಳೂರು ರೈಲ್ವೆ ವಿಭಾಗದ ಚಿಕ್ಕಬಾಣಾವರ ರೈಲು ನಿಲ್ದಾಣವನ್ನು ದಾಟಿದಾಗ ಮೊದಲ ಘಟನೆ ನಡೆದಿದೆ. ಕೋಚ್ C6ರ 40, 41 ಮತ್ತು 42 ಸೀಟ್ಗಳಲ್ಲಿರುವ ಕಿಟಕಿಯ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎಂದು ವರದಿ ತಿಳಿಸಿದೆ.