ನ್ಯೂಸ್ ನಾಟೌಟ್: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಮೂವರನ್ನು ಪೊಲೀಸರು ಬಂಧಿಸಿದ ಬೆನ್ನಲ್ಲೇ ಹಲವು ಬೆಳವಣಿಗೆಗಳು ನಡೆಯುತ್ತಿವೆ. 2022 ರಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದಿದ್ದ ಬಿಜೆಪಿ (BJP) ಕಾರ್ಯಕರ್ತ ರವಿಯನ್ನು ಮಂಡ್ಯದ (Mandya) ಪಶ್ಚಿಮ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ.
ರಾಜ್ಯಸಭೆ ಚುನಾವಣೆ ವೇಳೆ ವಿಧಾನಸೌಧದಲ್ಲೇ ಪಾಕ್ ಪರ ಘೋಷಣೆ ಮೊಳಗಿಸಿದ್ದ ಪ್ರಕರಣ ದೇಶಾದ್ಯಂತ ದೊಡ್ಡ ಸದ್ದು ಮಾಡಿತ್ತು. ಅದು ಪಾಕ್ ಪರ ಘೋಷಣೆ ಅಲ್ಲ, ಬದಲಿಗೆ ಚುಣಾವಣೆಯಲ್ಲಿ ಗೆದ್ದ ನಾಸಿರ್ ಹುಸೇನ್ ಪರ ಘೋಷಣೆ ಅಂತಾ ಕಾಂಗ್ರೆಸ್ ನಾಯಕರು ಹೇಳಿದ್ದರು. ಇದೀಗ, ಇದೇ ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಿದೆ. ಪಾಕ್ ಪರ ಘೋಷಣೆ ಕೂಗಿದ್ದು ದೃಢವಾಗಿದ್ದು, ಈ ಸಂಬಂಧ ಮೂವರು ಆರೋಪಿಗಳನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮೂವರು ಅರೆಸ್ಟ್ ಆಗುತ್ತಿದ್ದಂತೆ ಮಂಡ್ಯದಲ್ಲೂ ಓರ್ವನನ್ನು ಅರೆಸ್ಟ್ ಮಾಡಲಾಗಿದೆ.
2022ರಲ್ಲಿ ಮಂಡ್ಯದ ಸಂಜಯ್ ಸರ್ಕಲ್ನಲ್ಲಿ ಪಾಕಿಸ್ತಾನ ವಿದೇಶಾಂಗ ಸಚಿವನ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಅಂದು ಪಾಕ್ ವಿದೇಶಾಂಗ ಸಚಿವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ. ಈ ಹಿನ್ನೆಲೆ ಮಂಡ್ಯದ ಸಂಜಯ್ ವೃತ್ತದಲ್ಲಿ 2022 ಡಿಸೆಂಬರ್ 22 ರಂದು ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಬಿಜೆಪಿ ಕಾರ್ಯಕರ್ತರು ಪಾಕಿಸ್ತಾನ ಮುರ್ದಾಬಾದ್, ಹಿಂದೂಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗುತ್ತಿದ್ದರು.
ಘೋಷಣೆ ಕೂಗುವ ಬರದಲ್ಲಿ ಬಿಜೆಪಿ ಕಾರ್ಯಕರ್ತ ರವಿ ಕನ್ಫೂಜ್ ಆಗಿ ಪಾಕಿಸ್ತಾನ್ ಜಿಂದಾಬಾದ್ ಎಂದಿದ್ದರು. ಇದನ್ನು ಕೇಳಿಸಿಕೊಂಡ ಅರವಿಂದ ಎಂಬ ಕಾರ್ಯಕರ್ತ ರವಿ ಬಾಯಿ ಮುಚ್ಚಿದ್ದ, ಈ ಪ್ರಕರಣಕ್ಕೆ ಮತ್ತೆ ಜೀವ ಸಿಕ್ಕಿದೆ ಎನ್ನಲಾಗಿದೆ. ಇದೀಗ ಎರಡು ವರ್ಷದ ಬಳಿಕ ಈ ಸಂಬಂಧ ಬಿಜೆಪಿ ಕಾರ್ಯಕರ್ತ ರವಿ ಮೇಲೆ ಕಾಂಗ್ರೆಸ್ ದೂರು ಸಲ್ಲಿಸಿದೆ. ಕಾಂಗ್ರೆಸ್ ಕಾರ್ಯಕರ್ತ ಹನಿಂಬಾಡಿ ಕುಮಾರ್ ಎಂಬಾತ ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ದೂರಿನ ಅನ್ವಯ ಪೊಲೀಸರು ಎ1 ಆರಾಧ್ಯ, ಎ2 ರವಿ ಸೇರಿದಂತೆ ಇತರರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಇದೀಗ ಬಿಜೆಪಿ ಕಾರ್ಯಕರ್ತ ಡಣಾಯಕನಪುರ ರವಿಯನ್ನು ಅರೆಸ್ಟ್ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.