27.7 C
Sullia
Sunday, March 8, 2026

ದಸರಾ ರಜೆ 10 ದಿನ ವಿಸ್ತರಣೆ ಮಾಡಿದ ಸರ್ಕಾರ!! ಅಕ್ಟೋಬರ್ 18ರವರೆಗೆ ವಿಸ್ತರಣೆ,ಸರ್ಕಾರಿ ಶಾಲೆ ಶಿಕ್ಷಕರಿಗೆ ಸಮೀಕ್ಷೆ ಹೊರೆ

ನ್ಯೂಸ್ ನಾಟೌಟ್ : ರಾಜ್ಯದಲ್ಲಿ  ಅಕ್ಟೋಬರ್ 18ರವರೆಗೆ ಶಾಲೆಗಳ ದಸರಾ ರಜೆ ವಿಸ್ತರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಗೆ ಶಿಕ್ಷಕರನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಲು ಶಾಲೆಗಳ ದಸರಾ ರಜೆಯನ್ನು ಆಕ್ಟೋಬರ್ 18ರವರೆಗೆ ವಿಸ್ತರಿಸಲಾಗಿದೆ. ರಾಜ್ಯ ಸರ್ಕಾರಿ ನೌಕರರ ಸಂಘ ಕೂಡ ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿತ್ತು.
ಶಿಕ್ಷಕರನ್ನು ಅರ್ಧ ದಿನ ಸಮೀಕ್ಷೆ, ಅರ್ಧ ದಿನ ಶಾಲೆಗಳಲ್ಲಿ ಪಾಠ ಭೋಧನೆಗೆ ಬಳಕೆಯಿಂದ ಯಾವುದಕ್ಕೂ ನ್ಯಾಯ ನೀಡಲು ಆಗಲ್ಲ. ಹೀಗಾಗಿ ಪೂರ್ಣ ಪ್ರಮಾಣದಲ್ಲಿ ಶಾಲಾ ಶಿಕ್ಷಕರನ್ನು ಸಮೀಕ್ಷೆಗೆ ಬಳಕೆ ಮಾಡಲು ಅಕ್ಟೋಬರ್ 18ರವರೆಗೆ ಶಾಲೆಗಳ ದಸರಾ ರಜೆ ವಿಸ್ತರಿಸಲಾಗಿದೆ.

ಸಮೀಕ್ಷೆ ನಿರೀಕ್ಷೆಯಷ್ಟು ಪೂರ್ಣಗೊಂಡಿಲ್ಲ:

ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಸಮೀಕ್ಷೆ ಕಾರ್ಯವು ಸೆಪ್ಟೆಂಬರ್ 22 ರಿಂದ ಆರಂಭಗೊಂಡಿತ್ತು. ಇದನ್ನು ಅಕ್ಟೋಬರ್ 7 ರೊಳಗೆ ಪೂರ್ಣಗೊಳಿಸಲು ತೀರ್ಮಾನಿಸಲಾಗಿತ್ತು. ಆದರೆ, ಸಮೀಕ್ಷೆಯ ಪ್ರಗತಿ ನಿರೀಕ್ಷಿಸಿದಷ್ಟು ಆಗಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ರಾಜ್ಯದಾದ್ಯಂತ ನಮ್ಮ ನಿರೀಕ್ಷೆಗೆ ತಕ್ಕಂತೆ ಸರ್ವೇ ಪೂರ್ಣಗೊಂಡಿಲ್ಲ. ಕೊಪ್ಪಳದಂತಹ ಕೆಲವು ಜಿಲ್ಲೆಗಳಲ್ಲಿ ಶೇ. 97ರಷ್ಟು ಪ್ರಗತಿ ಸಾಧಿಸಿದ್ದರೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೇವಲ ಶೇ. 60ರಷ್ಟು ಮಾತ್ರ ಆಗಿದೆ. ಅಕ್ಟೋಬರ್ 7 ಕೊನೆಯ ದಿನವಾಗಿದ್ದರೂ, ಎಲ್ಲ ಜಿಲ್ಲೆಗಳಲ್ಲಿ ಸಂಪೂರ್ಣ ಸರ್ವೇ ಪೂರ್ಣವಾಗುವುದು ಅಸಾಧ್ಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Related Articles

LEAVE A REPLY

Please enter your comment!
Please enter your name here

Latest Articles