ನ್ಯೂಸ್ ನಾಟೌಟ್ : ಮಹಾಶಿವರಾತ್ರಿ ದಿನದಂದು ನಡೆದ ಅದ್ಧೂರಿ ಮೆರವಣಿಗೆಯಲ್ಲಿ ವಿದ್ಯುತ್ ಸ್ಪರ್ಶಿಸಿ 14 ಮಕ್ಕಳು ಮೃತಪಟ್ಟಿರುವ ದಾರುಣ ಘಟನೆ ಬಗ್ಗೆ ವರದಿಯಾಗಿದೆ. ಹಲವರ ಸ್ಥಿತಿ ಗಂಭೀರವಾಗಿದ್ದು, ಕೆಲವರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.
ರಾಜಸ್ಥಾನ ಕೋಟಾದ ಕುನ್ಹಾಡಿ ಥರ್ಮಲ್ ಚೌರಾ ಬಳಿ ಈ ಘಟನೆ ನಡೆದಿದೆ.ಗಂಭೀರ ಗಾಯಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.ಸ್ಥಳಕ್ಕೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಆಗಮಿಸಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.
ಆಸ್ಪತ್ರೆಯ ದೃಶ್ಯಾವಳಿಗಳು ಅಂತರ್ಜಾಲದಲ್ಲಿ ಕಾಣಿಸಿಕೊಂಡಿದ್ದು, ಪೋಷಕರು ತಮ್ಮ ಮಕ್ಕಳನ್ನು ತುರ್ತು ಚಿಕಿತ್ಸೆಗಾಗಿ ವೈದ್ಯರ ಬಳಿ ಧಾವಿಸುತ್ತಿರುವುದನ್ನು ತೋರಿಸುತ್ತಿದೆ. ಸದ್ಯಕ್ಕೆ ಸ್ಥಳೀಯ ಅಧಿಕಾರಿಗಳು ಸ್ಥಳಕ್ಕೆ ಮತ್ತು ಆಸ್ಪತ್ರೆಗೆ ಧಾವಿಸಿದ್ದಾರೆ.ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ 14 ಮಕ್ಕಳ ಷೋಷಕರ ರೋಧನೆ ಮುಗಿಲು ಮುಟ್ಟಿದೆ. ಇನ್ನೂ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಪೋಷಕರಿಗೆ ಸಾಂತ್ವನ ಹೇಳಲು ಜನಪ್ರತಿನಿಧಿಗಳು, ರಾಜಕಾರಣಿಗಳು ಸಂಘ ಸಂಸ್ಥೆ ಮುಖಂಡರು ಅಧಿಕಾರಿಗಳು ಸ್ಥಳಕ್ಕೆ ಬಂದು ಹೋಗಿದ್ದಾರೆ.