ನ್ಯೂಸ್ ನಾಟೌಟ್ : ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಸಿದ್ಧತೆ ನಡೆಯುತ್ತಿದೆ. ಇದಕ್ಕಾಗಿ ಪ್ರತಿ ಪಕ್ಷಗಳಲ್ಲಿಯೂ ರಾಜಕೀಯ ಚಟುವಟಿಕೆ ಬಿರುಸುಗೊಂಡಿದೆ. ಈಗ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಎಲ್ಲೆಡೆ ಚಾಲನೆ ಸಿಕ್ಕಿದ್ದು, ಈ ನಿಟ್ಟಿನಲ್ಲಿ ನವ ದೆಹಲಿಯಲ್ಲಿ ಸಭೆ ನಡೆಸುತ್ತಿರುವ ಕಾಂಗ್ರೆಸ್ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಇದರಲ್ಲಿ ಕರ್ನಾಟಕದ 8 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಮೊನ್ನೆ ಮೊನ್ನೆಯಷ್ಟೇ ಬಿಜೆಪಿಯಿಂದ ಕಾಂಗ್ರೆಸ್ಗೆ ವಲಸೆ ಹೋಗಿರುವ ಜಯಪ್ರಕಾಶ್ ಹೆಗ್ಡೆ ಅವರಿಗೆ ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ಅನ್ನು ನೀಡಲಾಗಿದೆ.ಇನ್ನು ಗೀತಾ ಶಿವರಾಜ್ಕುಮಾರ್ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ ಎನ್ನುವ ಮಾಹಿತಿ ಲಭಿಸಿದೆ.
ಕರ್ನಾಟಕದ (Congress Karnataka) 14 ಕ್ಷೇತ್ರಗಳ ಬಗ್ಗೆ ಚರ್ಚೆಯಾಗಿ 8 ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಕಾಂಗ್ರೆಸ್ನ ಮೊದಲ ಪಟ್ಟಿಯಲ್ಲಿ ವಿವಿಧ ರಾಜ್ಯಗಳ ಒಟ್ಟು 39 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.
ಎಂಟು ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳು
- ಉಡುಪಿ-ಚಿಕ್ಕಮಗಳೂರು – ಜಯಪ್ರಕಾಶ್ ಹೆಗ್ಡೆ – ಬಂಟ್ಸ್
- ಚಿತ್ರದುರ್ಗ – ಬಿ.ಎನ್ ಚಂದ್ರಪ್ಪ – ಎಸ್.ಸಿ
- ತುಮಕೂರು – ಮುದ್ದಹನುಮೇಗೌಡ – ಒಕ್ಕಲಿಗ
- ಶಿವಮೊಗ್ಗ – ಗೀತಾ ಶಿವರಾಜ್ ಕುಮಾರ್ – ಈಡಿಗ
- ಹಾಸನ – ಶ್ರೇಯಸ್ ಪಟೇಲ್ – ಒಕ್ಕಲಿಗ
- ವಿಜಯಪುರ – ರಾಜು ಆಲಗೂರು – ಎಸ್.ಸಿ
- ಮಂಡ್ಯ – ವೆಂಕಟರಮಣೇಗೌಡ (ಸ್ಟಾರ್ ಚಂದ್ರು) – ಒಕ್ಕಲಿಗ
- ಬೆಂಗಳೂರು ಗ್ರಾಮಾಂತರ – ಡಿ.ಕೆ. ಸುರೇಶ್ – ಒಕ್ಕಲಿಗ