ನ್ಯೂಸ್ ನಾಟೌಟ್ :ಬೆಳಗಾವಿ ಜಿಲ್ಲೆಯ (Belagavi News) ನಿಪ್ಪಾಣಿಯ ರಾಮ ಮಂದಿರವನ್ನು (Rama Mandir in Nippani) ಸ್ಫೋಟಿಸುವುದಾಗಿ ಬೆದರಿಕೆ ಪತ್ರ (Threatening Letter)ವೊಂದು ಬಂದಿದ್ದು ಎಲ್ಲರನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ.
ಇತಿಹಾಸ ಪ್ರಸಿದ್ದ ಕಾರಣಿಕ ಕ್ಷೇತ್ರ ಇದಾಗಿದ್ದು,ಇದನ್ನು ಸ್ಫೋಟ ನಡೆಸುವುದಾಗಿ ಹಿಂದಿಯಲ್ಲಿ ಬರೆದಿರುವ ಪತ್ರ ಬಂದಿದೆ.ಅಲ್ಲಾಹೋ ಅಕ್ಬರ್ ಎಂದೇ ಆರಂಭವಾಗುವ ಈ ಪತ್ರದಲ್ಲಿ ತಾಕತ್ತಿದ್ದರೆ ತಡೆಯಿರಿ ಎಂಬ ಸವಾಲು ಕೂಡಾ ಹಾಕಲಾಗಿದೆ.ಫೆಬ್ರವರಿ 7 ಮತ್ತು ಫೆಬ್ರವರಿ 28ರಂದು ಎರಡು ಪತ್ರಗಳು ಬಂದಿದ್ದು, ಮುಂದಿನ ಮಾರ್ಚ್ 20, 21 ತಾರೀಖಿನ ಒಳಗಡೆ ರಾಮ ಮಂದಿರವನ್ನು ದೊಡ್ಡ ಪ್ರಮಾಣದಲ್ಲಿ ಸ್ಫೋಟಿಸುವುದಾಗಿ ಎಂದು ಅನಾಮಧೇಯ ವ್ಯಕ್ತಿಗಳು ಪತ್ರ ಬರೆದಿದ್ದಾರೆ.
ಮೊದಲನೆಯ ಪತ್ರ ರಾಮ ಮಂದಿರ ಗರ್ಭ ಗುಡಿಯ ಸಮೀಪ ಪತ್ತೆಯಾಗಿದೆ.ಎರಡನೇ ಪತ್ರ ಮಂದಿರದ ಆವರಣದ ಹನುಮಾನ್ ಮಂದಿರದಲ್ಲಿ ಪತ್ತೆಯಾಗಿವೆ.ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದ ಓಲ್ಡ್ ಪಿಬಿ ರಸ್ತೆಯಲ್ಲಿರುವ ಶ್ರೀ ರಾಮಮಂದಿರ ಇದಾಗಿದ್ದು, ಪತ್ರವನ್ನು ಗಮನಿಸಿದ ದೇವಸ್ಥಾನದ ಅರ್ಚಕರ ಮೂಲಕ ನಿಪ್ಪಾಣಿ ನಗರ ಪೊಲೀಸರಿಗೆ ದೂರು ನೀಡಲಾಗಿದೆ.
ದೇವಸ್ಥಾದ ಅರ್ಚಕ ಸುರೇಶ ಜೀವಾಜಿ ದೇಶಪಾಂಡೆ ಅವರು ಮೊದಲು ಪತ್ರವನ್ನು ನೋಡಿದವರಾಗಿದ್ದಾರೆ. ಅವರು ದೇವಸ್ಥಾನದ ಆಡಳಿತ ಮಂಡಳಿಗೆ ಮೊದಲು ಮಾಹಿತಿ ನೀಡಿದ್ದರು. ಬಳಿಕ ಅಲ್ಲಿ ಚರ್ಚೆಯಾಗಿ ನಿಪ್ಪಾಣಿ ನಗರ ಠಾಣೆಗೆ ದೂರು ನೀಡಲಾಗಿದೆ.ಪತ್ರದ ಆರಂಭದಲ್ಲೇ ಅಲ್ಲಾ ಹೋ ಅಕ್ಬರ್ ಎಂದು ಬರೆಯಲಾಗಿದೆ. ಹೀಗಾಗಿ ಪೊಲೀಸರು ಇದನ್ನು ಗಂಭೀರವಾಗಿ ಪರಿಗಣಿಸಿ ನಿಪ್ಪಾಣಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.