ನ್ಯೂಸ್ ನಾಟೌಟ್: ಕಾಟನ್ ಕ್ಯಾಂಡಿ, ಗೋಬಿ ಮಂಚೂರಿ ಬ್ಯಾನ್ ಆಗಬೇಕು ಎಂಬ ಒತ್ತಾಯಗಳು ಕೇಳಿ ಬಂದ ಹಿನ್ನಲೆ ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಆರೋಗ್ಯಕ್ಕೆ ಹಾನಿ ಉಂಟು ಮಾಡುವ ಕೆಮಿಕಲ್ ಇದೆ ಎನ್ನುವ ಕಾರಣಕ್ಕಾಗಿ ಈಗಾಗಲೇ ಹೊರರಾಜ್ಯಗಳಲ್ಲಿ ಬ್ಯಾನ್ ಮಾಡಲಾಗಿದೆ. ಆದರೆ ಈಗ ರಾಜ್ಯದಲ್ಲಿ ಬಾಂಬೆ ಮಿಠಾಯಿ, ಗೋಬಿ ಮಂಚೂರಿಯಲ್ಲಿ ಕ್ಯಾನ್ಸರ್ ಕಾರಕ ಅಂಶ ಇರೋದು ಪತ್ತೆಯಾಗಿದೆ. ಈ ವರದಿ ಆರೋಗ್ಯ ಇಲಾಖೆ ಕೈ ಸೇರಿದ್ದು, ನಾಳೆ ಹೊರಬೀಳುವ ಸಾಧ್ಯತೆ ಇದೆ. ಈ ಸುದ್ದಿ ಬೆನ್ನಲ್ಲೆ ಕೆಲವರು ಕಬಾಬ್ ಕೂಡಾ ಬ್ಯಾನ್ ಮಾಡಿ ಎನ್ನುವ ಆಗ್ರಹ ಕೇಳಿ ಬಂದಿದೆ.
ಕಾಟನ್ ಕ್ಯಾಂಡಿಯಲ್ಲಿ ಹಾನಿಕಾರಕ ‘ರೋಡಮೈನ್-ಬಿ’ ಹಾಗೂ ಗೋಬಿ ಮಂಚೂರಿಯಲ್ಲಿ’ಸನ್ಸೆಟ್ ಯೆಲ್ಲೊ’ ಬಣ್ಣ ಮತ್ತು ‘ಟಾಟ್ರ್ರಾಜಿನ್’ ರಾಸಾಯನಿಕ ಅಂಶ ಪತ್ತೆಯಾದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ಎರಡೂ ತಿನಿಸುಗಳನ್ನು ನಿಷೇಧಿಸಲು ಮುಂದಾಗಿದೆ. ಆಹಾರ ಮತ್ತು ಸುರಕ್ಷತಾ ಇಲಾಖೆ ವರದಿ ಆಧರಿಸಿ ಆರೋಗ್ಯ ಸಚಿವರು ಸೋಮವಾರ ರಾಜ್ಯದಲ್ಲಿ ಇವುಗಳ ನಿಷೇಧ ಪ್ರಕಟಿಸುವ ಸಂಭವವಿದೆ.
ರಾಜ್ಯಾದ್ಯಂತ 170ಕ್ಕೂ ಹೆಚ್ಚು ಕಡೆ ಗೋಬಿ ಮಂಚೂರಿ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 100ಕ್ಕೂ ಹೆಚ್ಚು ಕಡೆ ಗೋಬಿ ಮಂಚೂರಿಗಳು ಅಸುರಕ್ಷಿತ ಎಂದು ವರದಿಯಲ್ಲಿಉಲ್ಲೇಖಿಸಿದ್ದಾಗಿ ತಿಳಿದು ಬಂದಿದೆ.ಗೋಬಿ ಮಂಚೂರಿ ಮಾದರಿಯಲ್ಲಿಯೇ ಚಿಕನ್ ಕಬಾಬ್ ಅನ್ನು ಸಿದ್ಧಪಡಿಸಲಾಗುತ್ತದೆ. ಕಬಾಬ್ನ ರುಚಿ ಹೆಚ್ಚಿಸಲು, ಆಕರ್ಷಕವಾಗಿ ಕಾಣುವಂತೆ ಮಾಡಲು ಪೌಡರ್ ಬಳಸಲಾಗುತ್ತದೆ. ಇದು ಕೂಡ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಕೂಡಲೇ ಈ ಮಾದರಿಯ ಕಬಾಬ್ ಅನ್ನು ನಿಷೇಧಿಸಬೇಕೆಂದು ಆಹಾರ ತಜ್ಞರು ಮತ್ತು ವೈದ್ಯರು ಒತ್ತಾಯಿಸಿದ್ದಾರೆ. ಕಬಾಬ್ ನಿಷೇಧಿಸುವ ಕೂಗು ಕೇಳಿ ಬರುತ್ತಿದೆ.ಕಬಾಬ್ ಹಸಿರು ಹಾಗೂ ಕೆಂಪು ಬಣ್ಣದಲ್ಲಿ ದೊರಕುತ್ತದೆ. ಕಬಾಬ್ಗೆ ಕೆಮಿಕಲ್ ಬಳಸಿ ಬಣ್ಣ ಬದಲಾಯಿಸಲಾಗುತ್ತದೆ. ಹೀಗಾಗಿ ಕಬಾಬ್ ನಿಷೇಧಿಸ ಬೇಕು ಎನ್ನಲಾಗುತ್ತಿದೆ.