ನ್ಯೂಸ್ ನಾಟೌಟ್ : ಮಾಜಿ ಸಚಿವ ಕೆಎಸ್ ಈಶ್ವರಪ್ಪ ಪುತ್ರ ಕಾಂತೇಶ್ ಗೆ ಟಿಕೆಟ್ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಹೇಳಿದ್ದಾರೆ.
ಇಂದು (ಮಾ.10) ಬೆಳ್ಳಂ ಬೆಳಿಗ್ಗೆ ಈಶ್ವರಪ್ಪ ಅಭಿಮಾನಿಗಳು ಮತ್ತು ಕುರುಬ ಸಮಾಜದ ಮುಖಂಡರು ಬಿಎಸ್ ಯಡಿಯೂರಪ್ಪ ಮನೆಗೆ ಭೇಟಿ ನೀಡಿ, ಕಾಂತೇಶ್ಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದರು.
ಈ ವೇಳೆ ಮಾತನಾಡಿದ ಬಿಎಸ್ ಯಡಿಯೂರಪ್ಪ ಶನಿವಾರ (ಮಾ.09) ರಂದು ಅವರ ಮನೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಕಳುಹಿಸಿದ್ದೆ. ದೆಹಲಿಯಲ್ಲಿ ಅಮಿತ್ ಶಾ ಜೊತೆ ಚರ್ಚಿಸಲು ನನ್ನ ಜೊತೆ ಈಶ್ವರಪ್ಪ ಬರಲಿ ಎಂದರು. ನಾನು ಬೇರೆ ಅಲ್ಲ ಈಶ್ವರಪ್ಪ ಬೇರೆ ಅಲ್ಲ. ನಾನೇ ಖುದ್ದಾಗಿ ಅವರ ಜೊತೆಗೆ ನಿಲ್ಲುತ್ತೇನೆ. ಕಾಂತೇಶ್ಗೆ ಟಿಕೆಟ್ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ಗಾಗಿ ಬಿಜೆಪಿಯ ಬಿಸಿ ಪಾಟೀಲ್, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಮತ್ತು ಕೆಎಸ್ ಈಶ್ವರಪ್ಪ ಪುತ್ರ ಕಾಂತೇಶ್ ಮಧ್ಯೆ ಪೈಪೋಟಿ ಏರ್ಪಟ್ಟಿದೆ.