ನ್ಯೂಸ್ ನಾಟೌಟ್: ಕರ್ನಾಟಕ ಬಿಜೆಪಿಯ ಪ್ರಬಲ ನಾಯಕರಾದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಪ್ಐಆರ್ ದಾಖಲಾಗಿದೆ. ಈ ಕುರಿತು ಕಾಂಗ್ರೆಸ್ ನಾಯಕರೊಬ್ಬರು ಪ್ರತಿಕ್ರಿಯಿಸಿ, ಈ ಬಗ್ಗೆ ಈಗಲೇ ಏನು ಹೇಳಲು ಆಗದು ಎಂದಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೇಲೆ ದಾಖಲಾಗಿರುವ ಪೋಕ್ಸೋ ಪ್ರಕರಣದ ಬಗ್ಗೆ ಮಾತನಾಡುವುದು ಸರಿಯಲ್ಲ. ಪ್ರಕರಣ ದಾಖಲಾದ ತಕ್ಷಣ ದೋಷಿ, ನಿರ್ದೋಷಿ ಎಂದು ಹೇಳುವುದು ಸರಿಯಲ್ಲ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಮಾಹಿತಿ ನೀಡಿದರು. ಈ ಪ್ರಕರಣದ ಬಗ್ಗೆ ಹೆಚ್ಚಿಗೆ ಮಾತನಾಡುವುದಿಲ್ಲ. ಸರಿಯಾಗಿ ತನಿಖೆಯಾಗಬೇಕು.
ವಿನಾಕಾರಣ ಯಾರನ್ನೂ ತೇಜೋವಧೆ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ. ಬಿಜೆಪಿ ನಾಯಕರಿಗೆ ದೇಶದ ಜನರ ಬಗ್ಗೆ ಕಾಳಜಿ ಇದ್ದರೆ ಗ್ಯಾಸ್ ಸಿಲಿಂಡರ್ ಬೆಲೆಯನ್ನು 1000 ರೂಪಾಯಿ ದರ ಇಳಿಸಬೇಕಿತ್ತು. ಸಿಕ್ಕಾಪಟ್ಟೆ ಬೆಲೆ ಏರಿಕೆ ಮಾಡಿ ಏರಿಸಿ ಈಗ 100 ರೂ. ಇಳಿಸಿದ್ದಾರೆ. ಇದು ಚುನಾವಣಾ ಗಿಮಿಕ್ ಹೊರತು ಜನರ ಮೇಲಿನ ಕಾಳಜಿಯಿಂದಲ್ಲ ಎಂದು ದೂರಿದ ಅವರು, ಪ್ರಧಾನಿ ಮೋದಿಯವರಿಗೆ ನೈತಿಕತೆಯಿದ್ದರೆ 1000 ರೂ. ಇಳಿಸಬೇಕು ಎಂದು ಆಗ್ರಹಿಸಿದ್ದಾರೆ.