ನ್ಯೂಸ್ ನಾಟೌಟ್: ಕಿಡ್ನಿ ಅನ್ನೋದು ದೇಹದ ಪ್ರಮುಖ ಅಂಗವಾಗಿದೆ. ಕಿಡ್ನಿಯ ಆರೋಗ್ಯದಲ್ಲಿ ಒಂದೇ ಒಂದು ಸಣ್ಣ ವ್ಯತ್ಯಾಸ ಕಂಡು ಬಂದರೂ ಕೂಡ ಅದು ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಈ ನಿಟ್ಟಿನಲ್ಲಿ ಮೂತ್ರಪಿಂಡಗಳ ಆರೋಗ್ಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿ ವರ್ಷ ಮಾರ್ಚ್ 14 ರಂದು ವಿಶ್ವ ಕಿಡ್ನಿ ದಿನಾಚರಣೆಯನ್ನು ಆಚರಿಸಲಾಗುತ್ತದೆ.
ಈ ವಿಶೇಷ ದಿನಾಚರಣೆಯ ಅಂಗವಾಗಿ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ B.sc Renal dialysis Technology ವಿಭಾಗದಿಂದ ಕೇಕ್ ಕತ್ತರಿಸುವ ಮೂಲಕ ವಿಶ್ವ ಕಿಡ್ನಿ ದಿನವನ್ನು ಸರಳವಾಗಿ ಆಚರಿಸಿದ್ದಾರೆ. ಈ ಸಂದರ್ಭ ಮೂತ್ರಪಿಂಡದ ಖಾಯಿಲೆಗಳಿಗೆ ಪ್ರಮುಖ ಕಾರಣಗಳು ಹಾಗೂ ತಡೆಗಟ್ಟುವ ವಿಧಾನಗಳ ಬಗ್ಗೆ ಮಾಹಿತಿ ನೀಡಲಾಯಿತು.ಈ ವೇಳೆ ಆಸ್ಪತ್ರೆಯ ವೈದ್ಯರು, ವಿದ್ಯಾರ್ಥಿಗಳು ಹಾಗೂ ಆಸ್ಪತ್ರೆಯ ಇತರೆ ಸಿಬ್ಬಂದಿ ಪಾಲ್ಗೊಂಡಿದ್ದರು.