ನ್ಯೂಸ್ ನಾಟೌಟ್: ಲೋಕಸಭಾ ಕ್ಷೇತ್ರದ ಚುನಾವಣಾ ಅಖಾಡ ರಂಗೇರಿದ್ದು, ಮೈಸೂರು-ಕೊಡಗು ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಬಿರುಸುಗೊಂಡಿದೆ. ಬಿಜೆಪಿ ಅಭ್ಯರ್ಥಿ ಆಗಿರುವ ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಈಗಾಗಲೇ ಪ್ರಚಾರ ಕಾರ್ಯ ಆರಂಭಿಸಿದ್ದಾರೆ.
ಹಾಲಿ ಸಂಸದ ಪ್ರತಾಪ್ ಸಿಂಹ ಸಹ ಯದುವೀರ್ ಅವರೊಂದಿಗೆ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡದ್ದು ವಿಶೇಷಾಗಿತ್ತು.ಚುನಾವಣಾ ಪ್ರಚಾರ ಸಂಬಂಧ ಸೋಮವಾರ(ಮಾ.೧೮) ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ಮಾಧ್ಯಮಗಳೊಂದಿಗೆ ಯದುವೀರ್ ಸಂವಾದ ನಡೆಸಿದ್ದಾರೆ.ನಮ್ಮ ತಂದೆ ನಾಲ್ಕು ಬಾರಿ ಸಂಸದರಾಗಿದ್ದರು. ನಮಗೆ ಎಲ್ಲ ಪಕ್ಷದವರೊಂದಿಗೆ ಸಂಬಂಧ ಇದೆ. ನನ್ನ ಪರಿಕಲ್ಪನೆಗೆ ಬಿಜೆಪಿಯೊಂದಿಗೆ ಹೊಂದಾಣಿಕೆ ಇದೆ. ಜನರಿಗೆ ಅರಮನೆ ಬಗ್ಗೆ ಭಾವನಾತ್ಮಕ ಸಂಬಂಧ ಇದೆ.
ಸಂವಿಧಾನದ ಅಡಿಯಲ್ಲಿ ಎಲ್ಲರೂ ಸಮಾನರು. ನಾನೂ ಸಹ ಸಾಮಾನ್ಯ ಸಂಸದನ ರೀತಿ ಕೆಲಸ ಮಾಡುತ್ತೇನೆ. ಆಧುನಿಕ ತಂತ್ರಜ್ಞಾನದ ಮೂಲಕ ಸಂಪರ್ಕ ಇಟ್ಟುಕೊಳ್ಳಬಹುದು. ನೀವು ಅರಮನೆಗೆ ಬರಬೇಕಿಲ್ಲ, ನಾನೇ ಅರಮನೆಯಿಂದ ಹೊರಗೆ ಬರುತ್ತೇನೆ. ನಾನು ರಾಜ ಅಂತ ಇದನ್ನು ಹೇಳಿಲ್ಲ. ಅರಮನೆಗೆ ಒಂದು ಪರಂಪರೆ ಇದೆ. ಅದನ್ನು ಹೊರತುಪಡಿಸಿ ನಾನು ಸಾಮಾನ್ಯನಾಗಿ ಇರುತ್ತೇನೆ. ನನ್ನನ್ನು ಸಂಸದ, ಪ್ರತಿನಿಧಿ ಹೇಗೆ ಬೇಕಾದರೂ ಕರೆಯಿರಿ ಎಂದು ಹೇಳಿಕೊಂಡಿದ್ದಾರೆ.ಇದೇ ವೇಳೆ ಹತ್ತಿರ ಕುಳಿತಿದ್ದ ಸಂಸದ ಪ್ರತಾಪ್ ಸಿಂಹ ಮಾತನಾಡಿ, ನಾನು ಪಕ್ಷಕ್ಕೂ ದ್ರೋಹ ಮಾಡಲ್ಲ, ಪಕ್ಕದಲ್ಲಿರುವವರಿಗೂ ದ್ರೋಹಮಾಡಲ್ಲ. 2014ರಲ್ಲಿ ನನಗೆ ಯಾಕೆ ಟಿಕೆಟ್ ಕೊಟ್ಟರು ಅಂತ ಹೈಕಮಾಂಡ್ ಹೇಳಿರಲಿಲ್ಲ. ನಾನು ಸಹ ಯಾಕೆ ಕೊಟ್ರಿ ಅಂತ ಕೇಳಿರಲಿಲ್ಲ. ಈಗಲೂ ಅಷ್ಟೇ ಯಾಕೆ ತಪ್ಪಿಸಿದ್ದೀರಿ ಅಂತಾನೂ ಕೇಳಿಲ್ಲ ಎಂದು ಹೇಳಿದ್ದಾರೆ.