ನ್ಯೂಸ್ ನಾಟೌಟ್: ಬೆಂಗಳೂರಿನ ನಗರ್ತಪೇಟೆಯಲ್ಲಿ ಹನುಮಾನ್ ಚಾಲೀಸಾ ಹಾಕಿದ್ದ ಎಂದು ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣ ವಿರೋಧಿಸಿ ಹಲ್ಲೆಗೊಳಗಾದ ಯುವಕ ಮುಖೇಶ್ ಅಂಗಡಿಯಿಂದ ಭಾಗವಧ್ವಜದೊಂದಿಗೆ ಹನುಮಾನ್ ಚಾಲೀಸ ಪಠಣ ಮಾಡಿಕೊಂಡು ಶಾಂತಿಯುತ ಮೆರವಣಿಗೆಯಲ್ಲಿ ಹಮ್ಮಿಕೊಂಡಿದ್ದರು.
ಬಿಜೆಪಿ ಕೂಡ ಇದರಲ್ಲಿ ಭಾಗಿಯಾಗಿದ್ದು, ರ್ಯಾಲಿ ವೇಳೆ ಹೈಡ್ರಾಮ ನಡೆದಿದೆ. ರ್ಯಾಲಿಗೆ ಅನುಮತಿ ತೆಗೆದುಕೊಂಡಿಲ್ಲ ಎಂದು ಪೊಲೀಸರು ನಿರಾಕರಿಸಿದ್ದಾರೆ. ಘಟನಾ ಸಂಬಂಧ ರ್ಯಾಲಿಯಲ್ಲಿ ಅಂಗಡಿ ಮಾಲೀಕನಾದ ಮುಖೇಶ್ ಕೂಡ ಭಾಗಿಯಾಗಿದ್ದ, ಆತನನ್ನು ಪೊಲೀಸರು ಬಂಧಿಸಿ ಕರೆದುಕೊಂಡು ಹೋಗುತ್ತಿದ್ದಾಗ ರ್ಯಾಲಿಗೆ ಬಂದಿದ್ದ ಶಾಸಕ ಸುರೇಶ್ ಪೊಲೀಸ್ ಜೀಪಿಗೆ ಅಡ್ಡ ನಿಂತರು. ಈ ವೇಳೆ ಪೊಲೀಸರು ಸುರೇಶ್ ಕುಮಾರ್ ಎಳೆದಾಡಿದ ಘಟನೆ ನಡೆದಿದೆ. ಇನ್ನು ರ್ಯಾಲಿಯಲ್ಲಿ ಭಾಗವಹಿಸಿದ ಶೋಭಾ ಕರಂದ್ಲಾಜೆ ಮತ್ತು ತೇಜಸ್ವಿ ಸೂರ್ಯರನ್ನು ಕೂಡ ಈ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶೋಭಾ ಕರಂದ್ಲಾಜೆ ಅವರನ್ನು ವಶಕ್ಕೆ ಪಡೆದು ಮೈಸೂರ್ ರೋಡ್ ಬಳಿಯ ಸಿಎಆರ್ ಗ್ರೌಂಡ್ ಗೆ ಪೊಲೀಸರು ಕರೆದೊಯ್ಯದ್ದಿದ್ದಾರೆ. ಎಷ್ಟೇ ಪ್ರಯತ್ನ ಪಟ್ಟರೂ ನಿಯಂತ್ರಣಕ್ಕೆ ಬಾರದ ಪ್ರತಿಭಟನಾಕಾರರನ್ನು, ಬಿಜೆಪಿ ಕಾರ್ಯಕರ್ತರನ್ನು ಕೂಡ ಬಂಧಿಸಿ ಸಿಎಆರ್ ಗ್ರೌಂಡ್ ಗೆ ಪೊಲೀಸರು ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಚನಾಕಾರರು ಮತ್ತು ಪೊಲೀಸರ ನಡುವೆ ತೀವ್ರ ವಾಗ್ವಾದ ನಡೆದಿದೆ. ನಗರತ್ ಪೇಟೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಬಿಜೆಪಿ ಎಂಪಿ ತೇಜಸ್ವಿ ಸೂರ್ಯ ಬಂದು, ಪ್ರತಿಭಟನಾ ನಿರತ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ ಪ್ರತಿಭಟನೆ ನಿಲ್ಲಿಸುವಂತೆ ಮನವಿ ಮಾಡಿದರು. ಆದರೆ ಅನುಮತಿ ಪಡೆಯಲಿಲ್ಲ ಎಂಬ ಕಾರಣ ನೀಡಿ ಪೊಲೀಸರು ವಿರೋಧ ವ್ಯಕ್ತಪಡಿಸಿದ್ದು, ಈಗ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ ಮಾಡಿದೆ.