ಬೆಂಗಳೂರು: ರಾಯಚೂರಿನಲ್ಲಿ ಇಡೀ ರಾಜ್ಯವೇ ತಲೆತಗ್ಗಿಸುವಂತಹ ಘಟನೆ ನಡೆದಿದ್ದು ಯೋಧನ ಕಣ್ಣೆದುರೇ ಆತನ ತಾಯಿಯನ್ನು ಹಲ್ಲೆ ನಡೆಸಿ ಹತ್ಯೆ ಮಾಡಿದ್ದಲ್ಲದೆ ಯೋಧನ ಮೇಲೆ ಮಾರಣಾಂತಿಕ ದಾಳಿ ನಡೆದಿದೆ. ಈ ಪ್ರಕರಣವನ್ನು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಸೇರಿದಂತೆ ಕನ್ನಡ ಸಂಘಟನೆಗಳು ಖಂಡಿಸಿವೆ. ಕಠಿಣ ಕಾನೂನು ಕ್ರಮಕ್ಕೆ ಒತ್ತಾಯಿಸಿವೆ.
ಈ ಬಗ್ಗೆ ರಾಜ್ಯಪಾಲರು, ಮುಖ್ಯಮಂತ್ರಿ, ಗೃಹ ಮಂತ್ರಿ, ಗಡಿ ಭದ್ರತಾ ಪಡೆಯ ಐಪಿಜಿಯವರಿಗೆ ದೂರು ನೀಡಿದ್ದೇವೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದೇವೆ ಎಂದು ಸಂಘದ ಅಧ್ಯಕ್ಷ ಎನ್ ,ಕೆ.ಶಿವಣ್ಣ ನ್ಯೂಸ್ ನಾಟೌಟ್ ಗೆ ಪ್ರತಿಕ್ರಿಯಿಸಿದ್ದಾರೆ. ರಜೆಯಲ್ಲಿ ಬಂದಿದ್ದ ಯೋಧನ ಕುಟುಂಬದ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆದಿದೆ. ದೇಶ ಕಾಯುವ ಯೋಧನಿಗೆ ಈ ಪರಿಸ್ಥಿತಿಯಾದರೆ ಜನಸಾಮಾನ್ಯರ ಗತಿ ಏನು ಎಂದು ಶಿವಣ್ಣ ಪ್ರಶ್ನಿಸಿದ್ದಾರೆ.