ನ್ಯೂಸ್ ನಾಟೌಟ್: ಪೆಟ್ರೋಲಿಯಂ ಪೈಫ್ ಲೈನ್ ಗೆ ಕನ್ನ ಕೊರೆದು ಲಕ್ಷಾಂತರ ಮೌಲ್ಯದ ಪೆಟ್ರೋಲ್ ಕಳ್ಳತನ ಮಾಡಿರುವ ಘಟನೆ ಬೆಳ್ತಂಗಡಿಯ ಪುದುವೆಟ್ಟುವಿನಲ್ಲಿ ಬೆಳಕಿಗೆ ಬಂದಿದ್ದು ಈ ಬಗ್ಗೆ ಕಂಪೆನಿ ನೀಡಿರುವ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ಬಗ್ಗೆ ಪೆಟ್ರೋನೆಟ್ ಎಂ ಹೆಚ್ ಬಿ ಲಿಮಿಟೆಡ್ ನ ನೆರಿಯದ ಸ್ಟೇಶನ್ ಇನ್ ಚಾರ್ಜ್ ಆಗಿರುವ ರಾಜನ್ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದಾರೆ. ಮಂಗಳೂರು, ಹಾಸನ ಬೆಂಗಳೂರು ಪೆಟ್ರೋನೆಟ್ ಪೈಪ್ ಮೂಲಕ ಪೆಟ್ರೋಲಿಯಂ ವಸ್ತುಗಳು ಸಾಗಾಟವಾಗುತ್ತಿದ್ದು ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಆಲಡ್ಕ ಎಂಬಲ್ಲಿ ಮಾ16ರಿಂದ 19ರ ವರೆಗೆ ಕಳ್ಳರು ಪೆಟ್ರೋಲಿಯಂ ಪೈಪ್ ಲೈನ್ ಗೆ ಕನ್ನಕೊರೆದು ಸದ್ರಿ ಪೈಪ್ ಲೈನ್ ಗೆ 2.5ಇಂಚಿನ ಹೆಚ್ ಡಿ.ಪಿ ಇ ಪೈಪ್ ಅನ್ನು ಅಳವಡಿಸಿ ಆಮೂಲಕ ಸುಮಾರು 12,000ಲೀಟರ್ ಗೂ ಅಧಿಕ ಡೀಸೆಲ್ ಅನ್ನು ಕಳವು ಮಾಡಿದ್ದು ಇದರ ಅಂದಾಜು ಮೌಲ್ಯ ಸುಮಾರು9,60,000 ಆಗಬಹುದು ಎಂದು ದೂರಿನಲ್ಲಿ ತಿಳಿಸಿದ್ದಾರೆ ಸ್ಥಳೀಯರ ಸಹಕಾರದೊಂದಿಗೆ ದೊಡ್ಡ ಮಟ್ಟದ ಡೀಸೆಲ್ ಕಳ್ಳತನ ನಡೆದಿದೆ ಎಂದು ಅನುಮಾನಿಸಲಾಗಿದೆ.