ಸುಳ್ಯ: ಕೋವಿಡ್ 19 ಸೋಂಕಿನ ಸಂದರ್ಭದಲ್ಲಿ ಶಾಲೆಗಳನ್ನು ಮತ್ತೆ ನಡೆಸಬೇಕು ಅಥವಾ ಬೇಡವೇ ಎನ್ನುವ ಕುರಿತು ನಿರ್ಧಾರ ತೆಗೆದುಕೊಳ್ಳುವ ಉದ್ದೇಶದಿಂದ ತಜ್ಞರ ಸಮಿತಿ ರಚಿಸಲಾಗಿದ್ದು ಈ ಸಮಿತಿಗೆ ಸದಸ್ಯರಾಗಿ ಶಿಕ್ಷಣ ತಜ್ಞ ಹಾಗೂ ಸ್ನೇಹಿ ಶಿಕ್ಷಣ ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಡಾ ಚಂದ್ರಶೇಖರ್ ದಾಮ್ಲೆ ಅವರನ್ನು ಆಯ್ಕೆ ಮಾಡಲಾಗಿದೆ. ಸದ್ಯ ಶಾಲೆಗಳ ತೆರೆಯುವ ಕುರಿತು ಸಾಕಷ್ಟು ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಇಂತಹ ಸಂದರ್ಭದಲ್ಲಿ ಶಿಕ್ಷಣ ಇಲಾಖೆ ಆಯುಕ್ತ ವಿ.ಅನ್ಬು ಕುಮಾರ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಟಾಸ್ಕ್ ಫೋರ್ಸ್ ಅನ್ನು ರಚಿಸಲಾಗಿದೆ. ಟಾಸ್ಕ್ ಫೋರ್ಸ್ನಲ್ಲಿ ಹಿರಿಯ ಅಧಿಕಾರಿಗಳು ಹಾಗೂ ಸರಕಾರೇತರ ಸಂಘ ಸಂಸ್ಥೆಗಳ ಪ್ರಮುಖರು ಇರಲಿದ್ದಾರೆ ಎಂದು ತಿಳಿಸಲಾಗಿದೆ. ಈ ಬಗ್ಗೆ ನ್ಯೂಸ್ ನಾಟೌಟ್ ಕನ್ನಡ ವೆಬ್ಸೈಟ್ಗೆ ಪ್ರತಿಕ್ರಿಯಿಸಿದ ಡಾ ದಾಮ್ಲೆಯವರು, ಇದೊಂದು ಜವಾಬ್ದಾರಿಯುತ ಕೆಲಸವಾಗಿದ್ದು ಇದನ್ನು ಯಶಸ್ವಿಯಾಗಿ ನಿರ್ವಹಿಸುತ್ತೇನೆ ಅನ್ನುವ ವಿಶ್ವಾಸ ನನಗಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ನನಗೆ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸಲು ಶ್ರಮಿಸುತ್ತೇನೆ ಎಂದು ತಿಳಿಸಿದರು.
- +91 73497 60202
- [email protected]
- November 22, 2024 5:06 AM