ನ್ಯೂಸ್ ನಾಟೌಟ್: ಧರ್ಮಸ್ಥಳ ದೇವಸ್ಥಾನಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಂಗಳವಾರ(ಮಾ.26) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಶ್ರೀ ಮಂಜುನಾಥಸ್ವಾಮಿಯು ಅನುಗ್ರಹ ಪಡೆದು ಚುನಾವಣಾ ಯುದ್ದಕ್ಕೆ ಹೊರಟಿದ್ದೇವೆ.
ನನಗೆ ಸದಾ ರಕ್ಷಣೆ ನೀಡುವವರು ಶ್ರೀ ಮಂಜುನಾಥ, ಶಿವ. ಹಾಗಾಗಿ ಕ್ಷೇತ್ರಕ್ಕೆ ಬಂದು ದರ್ಶನ ಪಡೆದು ಪೂಜೆ ಸಲ್ಲಿಸಿ ಚುನಾವಣಾ ಕಾರ್ಯಕ್ಕೆ ಇಳಿದಿದ್ದೇನೆ. ಜನ ಆಶೀರ್ವಾದ ಮಾಡುವ ನಂಬಿಕೆಯಿದೆ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ. ನಾವು ನುಡಿದಂತೆ ನಡೆದಿದ್ದೇವೆ ಎಲ್ಲ ಭರವಸೆಗಳನ್ನೂ ಈಡೇರಿಸಿದ್ದೇವೆ. ಮಾತುಬಿಡ ಮಂಜುನಾಥ ನುಡಿದಂತೆ ನಡೆಯಲು ನಮಗೆ ಶಕ್ತಿ ನೀಡಿದ್ದಾನೆ. ಅದೇ ದೊಡ್ಡ ಆಶೀರ್ವಾದವಾಗಿದೆ. ಜನರು ನೀಡಿದ ಅವಕಾಶದ ಸದುಪಯೋಗ ಪಡೆದುಕೊಂಡು ಜನರ ಋಣ ತೀರಿಸಿದ್ದೇವೆ. ಜನರು ಆಶೀರ್ವಾದ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.