ನ್ಯೂಸ್ ನಾಟೌಟ್: ಲೋಕಸಭೆ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ರೇಡಿಯೋ ಮಿರ್ಚಿ ಕಾರ್ಯಕ್ರಮ ಸಂಬಂಧ ಕೆಪಿಸಿಸಿ ವಕ್ತಾರ ಎಚ್.ಎ ವೆಂಕಟೇಶ್ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ ಎನ್ನಲಾಗಿದೆ.
ಮೈಸೂರಿನ 104.8 ರೇಡಿಯೋ ಮಿರ್ಚಿ ಚಾನೆಲ್ ನಲ್ಲಿ ಮೈಸೂರು ಕೊಡಗು ಕ್ಷೇತ್ರದ ಲೋಕಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮೈಸೂರು ಸಂಸ್ಥಾನದ ಇತಿಹಾಸದ ಬಗ್ಗೆ ಸಂದರ್ಶನದ ರೂಪದಲ್ಲಿ ʼರಾಜರಿಂದಲೇ ರಾಜರ ಕಥೆಗಳುʼ ಎಂಬ ಶೀರ್ಷಿಕೆಯಲ್ಲಿ ಮಾತನಾಡುತ್ತಾರೆ ಎಂದು ವರದಿ ತಿಳಿಸಿದೆ. ರೇಡಿಯೋದಲ್ಲಿ ಮಾತನಾಡುವ ಬಗ್ಗೆ ಕ್ಷಣ ಕ್ಷಣಕ್ಕೂ ರೇಡಿಯೋದಲ್ಲಿ ಜಾಹೀರಾತನ್ನು ಕೂಡ ಪ್ರಕಟಿಸಲಾಗುತ್ತಿದೆ. ಒಬ್ಬ ವ್ಯಕ್ತಿಯಾಗಿ ರಾಜರ ಬಗ್ಗೆ ಮಾತನಾಡುವುದರಲ್ಲಿ ತಪ್ಪಿಲ್ಲ.
ಆದರೆ ದಿನಾಂಕ 26.04.2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವುದರಿಂದ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆಗುತ್ತದೆ. ಯದುವೀರ್ ಮಾತುಗಳು ಮತದಾರರ ಮೇಲೆ ಪರಿಣಾಮ ಬೀರುವುದರಿಂದ ಈ ಕೂಡಲೇ ರೇಡಿಯೋದಲ್ಲಿ ಕಾರ್ಯಕ್ರಮ ಪ್ರಸಾರವಾಗದಂತೆ ನಿರ್ಬಂಧನೆ ವಿಧಿಸಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ.