ನ್ಯೂಸ್ ನಾಟೌಟ್: ಸಮುದ್ರದಲ್ಲಿ(sea) ಗುರುವಾರ(ಮಾ.28) ಮೀನುಗಾರರ ಬಲೆಗೆ ಅಪರೂಪದ ಮೀನು(fish) ಸಿಕ್ಕಿದ್ದು, ಮೀನಿನ ವಿಚಿತ್ರ ರೂಪವನ್ನು ಕಂಡು ಒಂದು ಕ್ಷಣ ಮೀನುಗಾರರೇ ಹೆದರಿದ್ದಾರೆ ಎನ್ನಲಾಗಿದೆ, ಈ ಘಟನೆ ಆಂಧ್ರ ಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆದಿದೆ.
ಮೀನಿನ ಬಗ್ಗೆ ವಿಶಾಖಪಟ್ಟಣಂನ ಸಹಾಯಕ ಮೀನುಗಾರಿಕಾ ನಿರ್ದೇಶಕ ಡಾ. ಪಿ. ಶ್ರೀನಿವಾಸ್ ರಾವ್ ಮಾಹಿತಿ ನೀಡಿದ್ದು, ಇದು ಪಫ್ಫರ್ ಫಿಶ್ ಎಂದು ತಿಳಿಸಿದ್ದಾರೆ. ಆದರೆ, ಸ್ಥಳೀಯ ಮೀನುಗಾರರು ಇದನ್ನು ಸಮುದ್ರ ಕಪ್ಪೆ ಎಂದು ಭಾವಿಸಿದ್ದರು. ಈ ಮೀನು ಸಮುದ್ರದ ಆಳದಲ್ಲಿ ಅಲೆದಾಡುತ್ತವೆ. ಬಲೆಗೆ ಬಿದ್ದಾಗ ಅಥವಾ ಯಾರಾದರು ದಾಳಿ ಮಾಡಿದಂತಹ ಸಂದರ್ಭದಲ್ಲಿ ತಮ್ಮ ದೇಹವನ್ನು ಬಲೂನ್ ರೀತಿ ಮಾಡಿಕೊಳ್ಳುತ್ತವೆ. ಈ ಮೀನು ನೋಡಲು ಸ್ವಲ್ಪ ಮನುಷ್ಯನ ಮುಖವನ್ನು ಹೋಲುತ್ತದೆ ಎನ್ನಲಾಗಿದೆ.
ಈ ಪಫ್ಪರ್ ಫಿಶ್ ತುಂಬಾ ವಿಷಕಾರಿ ಮೀನು. ಇತರ ಸಮುದ್ರ ಪ್ರಭೇದಗಳಿಂದ ತನ್ನನ್ನು ರಕ್ಷಿಸಿಕೊಳ್ಳಲು, ಈ ಮೀನಿನ ಯಕೃತ್ತಿನಲ್ಲಿ ಶಕ್ತಿಯುತವಾದ ವಿಷ ಉತ್ಪಾದನೆಯಾಗುತ್ತದೆ. ಈ ವಿಷವು ಸೈನೈಡ್ಗಿಂತ 1,000 ಪಟ್ಟು ಹೆಚ್ಚು ಮಾರಕವಾಗಿದೆ. ಇದನ್ನು ಹೆಚ್ಚಾಗಿ ಜಪಾನ್ ನಲ್ಲಿ ಸೇವನೆ ಮಾಡುತ್ತಾರೆ ಎಂದು ವರದಿ ತಿಳಿಸಿದೆ.(fishing mangalore)
Follow us for more updates:
FB PAGE : https://www.facebook.com/NewsNotOut2023
Insta : https://www.instagram.com/newsnotout/
Tweet : https://twitter.com/News_Not_Out
YouTube : https://www.youtube.com/@newsnotout8209
Koo app: https://www.kooapp.com/profile/NewsNotOut
Website : https://newsnotout.com/