ನ್ಯೂಸ್ ನಾಟೌಟ್: ಕೇಂದ್ರ ಚುನಾವಣಾ ಆಯೋಗದಲ್ಲಿ ಸರ್ಕಾರವು ತನ್ನದೇ ಆದ ಜನರನ್ನು ಹೊಂದಿದೆ ಮತ್ತು ಇವಿಎಂ ಇಲ್ಲದೆ ಚುನಾವಣೆಯನ್ನು ಗೆಲ್ಲಲು ಸಾಧ್ಯವಿಲ್ಲ ಎಂದು ಭಾಷಣ ಮಾಡಿದ ಎಐಸಿಸಿ ಮಾಜಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದೂರು ನೀಡಿದೆ. ಬಿಜೆಪಿ ಹಿರಿಯ ನಾಯಕ ಹರ್ದೀಪ್ ಸಿಂಗ್ ಪುರಿ ನೇತೃತ್ವದ ನಿಯೋಗ ದೇಶ ವಿರೋಧಿ ಹೇಳಿಕೆ ಎಂದು ವ್ಯಾಖ್ಯಾನಿಸಿ ದೂರು ನೀಡಿದೆ.
ಮ್ಯಾಚ್ ಫಿಕ್ಸಿಂಗ್ ಇಲ್ಲದೇ ಬಿಜೆಪಿ 400 ಪಾರ್ ಘೋಷಣೆ ಸಾಧ್ಯವಿಲ್ಲ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ‘ಅಂಪೈರ್’ಗಳನ್ನು ಆಯ್ಕೆ ಮಾಡಿದ್ದಾರೆ. ಇವಿಎಂಗಳು, ಮ್ಯಾಚ್ ಫಿಕ್ಸಿಂಗ್, ಸಾಮಾಜಿಕ ಮಾಧ್ಯಮಗಳು ಮತ್ತು ಮಾಧ್ಯಮ ಸಹಕಾರವಿಲ್ಲದೇ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 180ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಸಾಧ್ಯವಿಲ್ಲ. 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದರೆ ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ಬಿಜೆಪಿ ಸಂಸದರೊಬ್ಬರು ಹೇಳಿದ್ದಾರೆ. ಬಿಜೆಪಿಯ ಮ್ಯಾಚ್ ಫಿಕ್ಸಿಂಗ್ ಯಶಸ್ವಿಯಾದರೆ ಸಂವಿಧಾನ ಇರುವುದಿಲ್ಲ. ಸಂವಿಧಾನ ಇಲ್ಲದಿದ್ದರೆ ದೇಶವಿಲ್ಲ. ಬಿಜೆಪಿ ಅಧಿಕಾರದಲ್ಲಿ ನಾವು ಎಲ್ಲೆಡೆ ಬೆಂಕಿ ಕಾಣಬಹುದು ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.