ನ್ಯೂಸ್ ನಾಟೌಟ್: ಲೋಕ ಸಭಾ ಚುನಾವಣೆಗೆ ಸರ್ವ ಸಿದ್ಧತೆಗಳು ನಡೆಯುತ್ತಿದೆ. ಈ ಬೆನ್ನಲ್ಲೇ ಅವಘಡವೂ ಸಂಭವಿಸಿದೆ. ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಏ.2ರ ಮಂಗಳವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ದುರ್ಘಟನೆ ನಡೆದಿದೆ.
ಆತ್ಮಹತ್ಯೆಗೆ ಯತ್ನಿಸಿದ ಸಿಬ್ಬಂದಿಯನ್ನು ಶ್ರೀಧರ್ ಹೆಗಡೆ ಎಂದು ಗುರುತಿಸಲಾಗಿದೆ. ಇವರು ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿರುವ ಏಕಗವಾಕ್ಷಿ ಪದ್ದತಿ ತಂಡದ ಸದಸ್ಯರಾಗಿದ್ದರು. 2019ರಿಂದ ಬೆಳ್ತಂಗಡಿಯ ಕಡಿರು ಉದ್ಯಾವರ ಪಂಚಾಯಿತಿ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಜಾಗಕ್ಕೆ ಮತ್ತೊಬ್ಬರು ವರ್ಗಾವಣೆಯಾದ ಹಿನ್ನಲೆಯಲ್ಲಿ ಕಳೆದ ಫೆಬ್ರವರಿ ಹಾಗೂ ಮಾರ್ಚ್ ನಿಂದ ಸ್ಥಳ ನಿರೀಕ್ಷಣೆಯಲ್ಲಿದ್ದರು. ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆಗೆ ಯತ್ನಿಸಿದರು. ಕೂಡಲೇ ವೆನ್ ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗಿದೆ. ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ. ಸದ್ಯ ಅವರಿಗೆ ತುರ್ತು ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿದೆ.
ಇವರ ಪತ್ನಿ ಜಯಂತಿ ಸ್ಟಾಫ್ ನಸ್೯ ಆಗಿ ಬೆಳ್ತಂಗಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.