ನ್ಯೂಸ್ ನಾಟೌಟ್: ಶಾಲಾ ವಿದ್ಯಾರ್ಥಿನಿ ಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಡಿ ಕಾರ್ಕಳದ ಬೋಳ ವಂಜಾರಕಟ್ಟೆ ನಿವಾಸಿಯಾದ ಶಾಲೆಯ ಮುಖ್ಯ ಶಿಕ್ಷಕ ರಾಜೇಂದ್ರ ಆಚಾರ್ (58)ನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಸ್ಥಳೀಯ ದೇವಸ್ಥಾನವೊಂದರ ಅರ್ಚಕರೂ ಆಗಿದ್ದರು ಎನ್ನಲಾಗಿದೆ. ಬಂಧಿತ ಆರೋಪಿ ಪ್ರಾಥಮಿಕ ಶಾಲೆಯ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಯರಿಗೆ ನಿರಂತರ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.. ಈ ಬಗ್ಗೆ ಅನೇಕ ದೂರುಗಳಿದ್ದು, ಊರವರು ಬುದ್ಧಿವಾದ ಹೇಳಿದ್ದರು. ಆದರೂ ಮುಖ್ಯ ಶಿಕ್ಷಕ ಚಾಳಿ ಬಿಟ್ಟಿರಲಿಲ್ಲ. ಮುಂದುವರೆದ ಕಾರಣ ಉಡುಪಿಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ (ಮಕ್ಕಳ ಕ್ಷೇಮಾಭಿವೃದ್ಧಿ ಘಟಕ) ಅಧಿಕಾರಿಗಳು ಶಾಲೆಗೆ ಆಗಮಿಸಿ ಸಮಗ್ರ ತನಿಖೆ ನಡೆಸಿದ್ದರು.
ಈತನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದ ಅಪ್ರಾಪ್ತ ವಯಸ್ಸಿನ ಒಟ್ಟು 14 ಮಂದಿ ವಿದ್ಯಾರ್ಥಿನಿಯರಿಂದ ದೂರು ಪಡೆದುಕೊಂಡಿದ್ದರು. ಈ ಬಗ್ಗೆ ಸೂಕ್ತ ಸಾಕ್ಷ್ಯಧಾರಗಳನ್ನು ಸಂಗ್ರಹಿಸಿದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿ ತಿಳಿಸಿದೆ. ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು, ಈತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.