ನ್ಯೂಸ್ ನಾಟೌಟ್: ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪರಮಾಣು ಬಾಂಬ್ ಹಾಕುವುದಾಗಿ ಭದ್ರತಾ ಸಿಬ್ಬಂದಿಗೆ ಬೆದರಿಕೆಯೊಡ್ಡಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಇಬ್ಬರು ಪ್ರಯಾಣಿಕರನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ.
ಈ ಘಟನೆ ಏಪ್ರಿಲ್ 5ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ದೆಹಲಿ ವಿಮಾನ ನಿಲ್ದಾಣ ಠಾಣೆ ಪೊಲೀಸರು ಬಂಧಿತ ಆರೋಪಿಗಳ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.