ಕೀವ್: ರಷ್ಯಾ ದಾಳಿಗೆ ತುತ್ತಾಗಿರುವ ಉಕ್ರೇನ್ನಲ್ಲಿ ಕರ್ನಾಟಕದ ವಿದ್ಯಾರ್ಥಿ ನವೀನ್ ಎಂಬುವರು ಮೃತಪಟ್ಟಿದ್ದಾರೆ. ಈ ಬಗ್ಗೆ ಕೇಂದ್ರ ವಿದೇಶಾಂಗ ವ್ಯವಹಾರಗಳ ಇಲಾಖೆ ಮಾಹಿತಿ ನೀಡಿದೆ. ನವೀನ್ ಹಾವೇರಿಯವರಾಗಿದ್ದು, 4ವರ್ಷಗಳಿಂದ ಉಕ್ರೇನ್ನಲ್ಲಿ ನೆಲೆಸಿದ್ದರು.
ಬೆಳಗ್ಗೆ 11.30ಕ್ಕೆ (ಭಾರತೀಯ ಕಾಲಮಾನ) ಕೊನೇ ಬಾರಿ ಸಂಪರ್ಕಕ್ಕೆ ಸಿಕ್ಕಿದ್ದರು. ಅವರೀಗ ಮೃತಪಟ್ಟಿದ್ದು ದೃಢಪಟ್ಟಿದೆ. ಉಕ್ರೇನ್ನಲ್ಲಿ ರಷ್ಯಾ ನಡೆಸಿದ ದಾಳಿಗೆ ಭಾರತದ ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದನ್ನು ತಿಳಿಸಲು ವಿಷಾದಿಸುತ್ತೇವೆ. ವಿದ್ಯಾರ್ಥಿಯ ಕುಟುಂಬಕ್ಕೆ ನಮ್ಮ ಸಾಂತ್ವನಗಳು ಎಂದು ವಿದೇಶಾಂಗ ವ್ಯವಹಾರಗಳ ಇಲಾಖೆ ವಕ್ತಾರ ಅರವಿಂದ್ ಬಾಗ್ಚಿ ಟ್ವೀಟ್ ಮಾಡಿದ್ದರು.