ಎ.10 ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಪ್ರಥಮ ಪಿಯುಸಿ ಅನುತ್ತೀರ್ಣರಾಗಿ ಅಥವಾ ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿ ಖಾಸಗಿಯಾಗಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತರಗತಿಗಳನ್ನು ನಡೆಸುತ್ತಿರುವ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ವಾಣಿಜ್ಯ ವಿಭಾಗದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ.100 ಫಲಿತಾಂಶ ದಾಖಲಾಗಿದೆ.
ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 11 ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, ಮೂವರು ಪ್ರಥಮ ದರ್ಜೆಯಲ್ಲಿ, ಮೂವರು ದ್ವಿತೀಯ ದರ್ಜೆಯಲ್ಲಿ, ಇಬ್ಬರು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಸಿಂಚನಾ ಪಿ (530) ಅಶ್ವಿನಿ ಪಿ (529) ಹಸನ್ ಅಮ್ರಾ ಶಿಹಾಬುದ್ದೀನ್ (521), ಅನನ್ಯ ಸಿ. ಕೆ (475), ವರ್ಷನ್ ಜಿ (454), ಮಹಮ್ಮದ್ ಫಾಝಿಲ್ (363) ಅಂಕ ಗಳಿಸಿದ್ದಾರೆ. ಕಲಾ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 4 ವಿದ್ಯಾರ್ಥಿಗಳ ಪೈಕಿ ಇಬ್ಬರು ಪ್ರಥಮ ದರ್ಜೆಯಲ್ಲಿ ಒಬ್ಬ ವಿದ್ಯಾರ್ಥಿ ದ್ವಿತೀಯ ದರ್ಜೆಯಲ್ಲಿ ಉತ್ತಿರ್ಣರಾಗಿದ್ದಾರೆ. ವಿಜಯಾ ಡಿ ಎಸ್ (453), ಪವಿತ್ರ (400) ಅಂಕ ಗಳಿಸಿದ್ದಾರೆ ಎಂದು ವರದಿ ತಿಳಿಸಿದೆ.