ನ್ಯೂಸ್ ನಾಟೌಟ್: ವೇಗವಾಗಿ ಬಂದ ಕಾರು, ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ದೆಹಲಿಯ ನೆರೆಯ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ.
ಬೈಕ್ ನಲ್ಲಿದ್ದ ಮತ್ತೊಬ್ಬ ಮಹಿಳೆಗೆ ಗಂಭೀರ ಗಾಯಗಳಾಗಿವೆ. ಗ್ರೇಟರ್ ನೋಯ್ಡಾದ ಕ್ರಾಸಿಂಗ್ ಪ್ಯಾರಿ ಚೌಕ್ ಬಳಿ ತಡರಾತ್ರಿ ಈ ಘಟನೆ ನಡೆದಿದೆ. ಸುರೇಂದ್ರ ಎಂಬಾತ ತನ್ನ ಸಹೋದರಿಯರೊಂದಿಗೆ ಮದುವೆ ಸಮಾರಂಭದಲ್ಲಿ ಪಾಲ್ಗೊಂಡು ಮನೆಗೆ ಮರಳುತ್ತಿದ್ದಾಗ ಅಪಘಾತವಾಗಿದೆ. ಸುರೇಂದ್ರ ಸಹೋದರಿಯರಾದ ಶೈಲಿ ಮತ್ತು ಅಂಶು ಕೂಡ ಮೃತಪಟ್ಟಿದ್ದಾರೆ.
ವೇಗವಾಗಿ ಬಂದ ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದೆ. ವ್ಯಕ್ತಿ ಮತ್ತು ಆತನ ಸಹೋದರಿಯರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಸುರೇಂದ್ರ ತನ್ನ ಸಹೋದರಿಯರೊಂದಿಗೆ ನೋಯ್ಡಾದ ಕುಲೇಸರ ಎಂಬ ತಮ್ಮ ನಿವಾಸಕ್ಕೆ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದು ಗಾಯಾಳುಗಳ ಮೇಲೆ ಹರಿದಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.