ನ್ಯೂಸ್ ನಾಟೌಟ್: ಉತ್ತರ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗುವ (Rain) ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಉತ್ತರ ಒಳನಾಡಿನ ಬೀದರ್, ಕಲಬುರಗಿ, ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಲಿದೆ. ಈ ಪ್ರದೇಶದ ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ ಎಂದಿದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ. ಉಳಿದೆಡೆ ಶುಷ್ಕ ವಾತಾವರಣ ಇರಲಿದೆ.
ಇತ್ತ ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದ ಅಲ್ಲಲ್ಲಿ ಸಣ್ಣ ಮಳೆಯಾಗಬಹುದು. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಹವಾಮಾನದ ಪರಿಸ್ಥಿತಿಗಳು ಇರಲಿವೆ. ಮುಖ್ಯವಾಗಿ ಏಪ್ರಿಲ್ 18 ರಿಂದ 20 ರವರೆಗೆ ಇದೇ ಹವಾಮಾನ ಇರಲಿದೆ ಎಂದಿದೆ. ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ30-40 ಕಿ.ಮೀ ವೇಗದಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.