21.6 C
Sullia
Sunday, March 8, 2026

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಒಂದು ವರ್ಷ ಗಡೀಪಾರು, ಪುತ್ತೂರು ಸಹಾಯಕ ಆಯುಕ್ತರಿಂದ ಆದೇಶ

ನ್ಯೂಸ್ ನಾಟೌಟ್: ಹಿಂದೂ ಮುಖಂಡ, ಸೌಜನ್ಯ ಪರ ಹೋರಾಟಗಾರ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ. ತಿಮರೋಡಿ ವಿರುದ್ಧ 32 ಪ್ರಕರಣಗಳು ವಿವಿಧ ಠಾಣೆಗಳಲ್ಲಿ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸರು ಸಲ್ಲಿಸಿದ ಕೋರಿಕೆಯನ್ನು ಮನ್ನಿಸಿ ಪುತ್ತೂರು ಎಸಿ ಅವರು ಈ ಆದೇಶ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಪುತ್ತೂರು ಸಹಾಯಕ ಆಯುಕ್ತ (ಎಸಿ) ಸ್ಟೆಲ್ಲಾ ವರ್ಗಿಸ್ ಅವರಿಗೆ ಬೆಳ್ತಂಗಡಿ ಪೊಲೀಸರು ಪ್ರಕರಣದ ಬಗ್ಗೆ ವರದಿ ನೀಡಿದ್ದನ್ನು ಪರಿಶೀಲನೆ ನಡೆಸಿ ವರದಿಯ ಆಧಾರದಲ್ಲಿ ಸೆ.18ರಂದು ಮಹೇಶ್ ಶೆಟ್ಟಿ ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷಗಳ ಅವಧಿಗೆ ಗಡಿಪಾರು ಮಾಡಿ ಆದೇಶ ಮಾಡಿರುವುದಾಗಿ ತಿಳಿದು ಬಂದಿದೆ.

ಗಡಿಪಾರು ಮಾಡಿದ ಆದೇಶದ ಪ್ರತಿ ಬಂಟ್ವಾಳ ಉಪವಿಭಾಗದ ಡಿವೈಎಸ್ಪಿಗೆ ಬಂದ ಬಳಿಕ ಗಡಿಪಾರು ಮಾಡುವ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

Related Articles

LEAVE A REPLY

Please enter your comment!
Please enter your name here

Latest Articles