ನ್ಯೂಸ್ ನಾಟೌಟ್: ಕಾಂಗ್ರೆಸ್ ಸರ್ಕಾರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಐದು ಗ್ಯಾರಂಟಿಗಳಲ್ಲಿ ಶಕ್ತಿ ಯೋಜನೆ ಕೂಡ ಒಂದು. ರಾಜ್ಯದ ಮಹಿಳೆಯರಿಗೆ ಸರ್ಕಾರದ ಸಮಾನ್ಯ ಬಸ್ಗಳಲ್ಲಿ ಉಚಿತ ಪ್ರಯಾಣ ಒದಗಿಸುವ ಈ ಯೋಜನೆ ಯಶಸ್ವಿಯಾಗಿದೆ. ಲೋಕಸಭಾ ಚುನಾವಣೆಗೂ ಕಾಂಗ್ರೆಸ್ ತನ್ನ ಗ್ಯಾರಂಟಿ ಯೋಜನೆಗಳನ್ನೇ ಪ್ರಚಾರಕ್ಕೆ ಬಳಸಿಕೊಳ್ಳುತ್ತಿದೆ.
ತಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಜನರಿಗೆ ತಿಳಿಸುತ್ತಿದೆ. ಪ್ರಚಾರ ಸಮಾವೇಶಗಳಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ತಮ್ಮ ಕೃತಜ್ಞತೆ ಸಲ್ಲಿಸುತ್ತಿದ್ದಾರೆ. ನಿನ್ನೆ ನಡೆದ ಹಾಸನ ಲೋಕಸಭಾ ಕ್ಷೇತ್ರದ ಪ್ರಚಾರದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕಾನೂನು ವಿದ್ಯಾರ್ಥಿಯೊಬ್ಬರು ವಿಶೇಷ ಉಡುಗೊರೆ ನೀಡಿದ್ದಾರೆ. ಅರಸೀಕೆರೆಯ ಕಾನೂನು ವಿದ್ಯಾರ್ಥಿನಿ ಜಯಶ್ರೀ ಇಷ್ಟು ದಿನ ತಾವು ಬಸ್ಗಳಲ್ಲಿ ಪ್ರಯಾಣ ಮಾಡುವಾಗ ಪಡೆದ ಉಚಿತ ಬಸ್ ಟಿಕೆಟ್ಗಳನ್ನೇಲ್ಲಾ ಕೂಡಿಟ್ಟು, ಸುಂದರವಾದ ಹಾರ ತಯಾರಿಸಿದ್ದಾರೆ.
ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೊರಳಿಗೆ ಹಾಕಿ ಧನ್ಯವಾದ ತಿಳಿಸಿದ್ದಾರೆ. “ನೀವು ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿದ್ದರಿಂದ ನಾನು ಕಾನೂನು ವ್ಯಾಸಂಗವನ್ನು ಸುಗಮವಾಗಿ ನಡೆಸುವಂತಾಗಿದೆ. ಎಂದಾದರೂ ನೀವು ಸಿಕ್ಕರೆ ಮಾಲೆ ಮಾಡಿ ಹಾಕಬೇಕೆಂದು ಉಚಿತ ಟಿಕೆಟ್ ಗಳನ್ನು ಸಂಗ್ರಹಿಸಿಟ್ಟಿದೆ. ನೀವು ಇಲ್ಲಿ ಬರುವುದು ಗೊತ್ತಾಗಿ ಅವುಗಳನ್ನು ಮಾಲೆ ಕಟ್ಟಿ ತಂದೆ ಎಂದು ಹೇಳಿದ ಅವಳ ಮಾತುಗಳಲ್ಲಿ ಕೃತಜ್ಞತೆಯೂ ಇತ್ತು, ಸರ್ಕಾರದ ಬಗ್ಗೆ ಹೆಮ್ಮೆಯೂ ಇತ್ತು” ಎಂದು ಜಯಶ್ರೀ ಹೇಳಿಕೊಂಡಿದ್ದಾಳೆ.