ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ -2020 (ಎನ್ಇಪಿ) ಹಾಗೂ ಅದರ ನಿಯಮಗಳಲ್ಲಿ ಯಾವುದೇ ಭಾಷೆಯನ್ನು (ಕನ್ನಡ ಸೇರಿದಂತೆ) ಪದವಿ ಶಿಕ್ಷಣದಲ್ಲಿ ಕಡ್ಡಾಯಗೊಳಿಸುವ ಸಂಬಂಧ ಉಲ್ಲೇಖಗಳಿಲ್ಲ ಎಂದು ಕೇಂದ್ರ ಸರಕಾರ ಸ್ಪಷ್ಟಪಡಿಸಿದೆ.
ಈ ಕುರಿತಂತೆ ಹೈಕೋರ್ಟ್ ಗೆ ಪ್ರಮಾಣಪತ್ರ ಸಲ್ಲಿಸಿದೆ. ಇದರಿಂದ ಪದವಿ ಭಾಷೆಯಲ್ಲಿ ಕನ್ನಡ ಕಲಿಕೆ ಕಡ್ಡಾಯ ಮಾಡಿರುವ ರಾಜ್ಯ ಸರಕಾರಕ್ಕೆ ತೀವ್ರ ಹಿನ್ನಡೆಯಾದಂತಾಗಿದೆ.