ನ್ಯೂಸ್ ನಾಟೌಟ್: ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆಯ ಹೊರಗೆ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ಹೊಸ ತಿರುವು ಸಿಕ್ಕಿದೆ. ಇಬ್ಬರೂ ಶಂಕಿತ ಆರೋಪಿಗಳು ಅರೆಸ್ಟ್ ಆಗಿರುವ ಬೆನ್ನಲ್ಲೇ ಅಪರಾಧದಲ್ಲಿ ಬಳಸಿದ ಮೊದಲ ಗನ್ ಪೊಲೀಸರಿಗೆ ಸಿಕ್ಕಿತ್ತು. ಇದೀಗ ಎರಡನೇ ಗನ್ ಕೂಡ ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ದಿನದಿಂದ ದಿನಕ್ಕೆ ತನಿಖೆ ಚುರುಕಾಗುತ್ತಿದೆ.
ಸಲ್ಮಾನ್ ಖಾನ್ ದುಬೈಗೆ ಹಾರಿದ ಬೆನ್ನಲ್ಲೇ ಎನ್ಕೌಂಟರ್ ಸ್ಪೆಷಲಿಷ್ಟ್ ದಯಾ ನಾಯಕ್ ಎಂಟ್ರಿ ಕೊಟ್ಟಿದ್ದಾರೆ. ಇದೀಗ ತನಿಖೆಯ ವೇಳೆ, ಸೂರತ್ನ ತಾಪಿ ನದಿಯಲ್ಲಿ ಗನ್ ಎಸೆದಿರುವುದಾಗಿ ಹೇಳಿದ್ದರು. ಅವರ ಹೇಳಿಕೆ ಬೆನ್ನಲ್ಲೇ ಕಾರ್ಯಚರಣೆ ನಡೆಸಿದ ಬಳಿಕ ಎರಡನೇ ಗನ್ ಕೂಡ ಮುಂಬೈ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜೊತೆಗೆ 3 ಮ್ಯಾಗಜೀನ್ಗಳನ್ನು ಸಹ ವಶಪಡಿಸಿಕೊಂಡಿದ್ದಾರೆ. ಸಲ್ಮಾನ್ ಖಾನ್ ಮುಂಬೈ ನಿವಾಸದ ಹೊರಗೆ ಏ.14ರಂದು ಗುಂಡಿನ ದಾಳಿ ನಡೆದಿತ್ತು. ಈ ದಾಳಿಯಲ್ಲಿ ತಮ್ಮದೇ ಕೈವಾಡವಿದೆ ಎಂದು ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಹೇಳಿಕೊಂಡಿದ್ದರು.
ಇದಾದ ಕೆಲವೇ ಗಂಟೆಗಳಲ್ಲಿ ಇಬ್ಬರೂ ಶಂಕಿತರನ್ನು ಬಂಧಿಸಿ ತನಿಖೆ ಚುರುಕುಗೊಳಿಸಿದ್ದರು. ಸಿಸಿಟಿವಿ ದೃಶ್ಯದಲ್ಲಿ ಕಾಣಿಸಿಕೊಂಡ 2 ಶೂಟರ್ಗಳನ್ನು ಮುಂಬೈ ಪೊಲೀಸರು ಗುರುತಿಸಿ ಬಂಧಿಸಿದ್ದರು. ಅನ್ಮೋಲ್ನ ಫೇಸ್ಬುಕ್ ಪೇಜ್ನಲ್ಲಿ, ಈ ಘಟನೆ ಟ್ರೈಲರ್ ಮಾತ್ರ. ಇದಕ್ಕಿಂತಲೂ ಭೀಕರ ಪರಿಣಾಮವನ್ನು ಮುಂದೆ ಎದುರಿಸಬೇಕಾಗುತ್ತದೆ ಎಂದು ಸಲ್ಮಾನ್ ಖಾನ್ಗೆ ಎಚ್ಚರಿಕೆ ನೀಡಿದ್ದರು. ಜೈಲಿನಲ್ಲಿರುವ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್, ಸಲ್ಮಾನ್ ಖಾನ್ ಹತ್ಯೆ ಮಾಡುವುದಾಗಿ ಹೇಳಿದ್ದ ಎನ್ನಲಾಗಿದೆ.