ನ್ಯೂಸ್ ನಾಟೌಟ್: ಡಾ. ರಾಜ್ಕುಮಾರ್ ಹಾಗೂ ಹಾಸ್ಯ ನಟ ಜಗ್ಗೇಶ್ ಕುಟುಂಬದ ಜೊತೆ ಜಗ್ಗೇಶ್ ಒಳ್ಳೆಯ ಒಡನಾಟ ಹೊಂದಿದ್ದರು. ಅಣ್ಣಾವ್ರ ಜನ್ಮದಿನ ಹಿನ್ನೆಲೆಯಲ್ಲಿ ಜಗ್ಗೇಶ್ ಕಂಠೀರವ ಸ್ಟುಡಿಯೋಗೆ ಭೇಟಿ ನೀಡಿ ಅಣ್ಣಾವ್ರ ಸಮಾಧಿಗೆ ನಮಿಸಿ ಹಳೆ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಜಗ್ಗೇಶ್ ಹಾಸ್ಯ ಕಲಾವಿದರಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು.
1992ರಲ್ಲಿ ರಿಲೀಸ್ ಆದ ‘ತರ್ಲೆ ನನ್ಮಗ’ ಸಿನಿಮಾ ಮೂಲಕ ಹೀರೋ ಆದವರು. ಆ ಬಳಿಕ ಹಲವು ಸಿನಿಮಾಗಳಲ್ಲಿ ನಟಿಸಿದರು. 1994ರ ಸಮಯದಲ್ಲಿ ಅವರ ಸಿನಿಮಾಗಳು ಫ್ಲಾಪ್ ಆದವು. ಇದರಿಂದ ಬೇಸರಗೊಂಡ ಜಗ್ಗೇಶ್ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದರು. ಆ ವೇಳೆ ಅವರಿಗೆ ಅಣ್ಣಾವ್ರು ಆತ್ಮಸ್ಥೈರ್ಯ ತುಂಬಿದ್ದರು ಎಂದಿದ್ದಾರೆ. ಜಗ್ಗೇಶ್ ಮಾತನಾಡಿ,‘ನಾನು ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದೆ.
ಮಣಿಪಾಲ್ ಆಸ್ಪತ್ರೆಗೆ ನನ್ನನ್ನು ಅಡ್ಮಿಟ್ ಮಾಡಿದ್ದರು. ಅಣ್ಣಾವ್ರು ಬಂದು ತಲೆ ಮೇಲೆ ಕೈ ಇಟ್ಟು ಒಳ್ಳೆಯದಾಗಲಿ ಎಂದು ಆಶೀರ್ವಾದ ಮಾಡಿದ್ದರು. ಯಾವುದೇ ಕಾರಣಕ್ಕೂ ಅತಿಯಾದ ಆಸೆ ಬೇಡ, ಜಗತ್ತನ್ನು ಮೆಚ್ಚಿಸಿ ಬದುಕೋಕೆ ಹೋಗಬಾರದು ಎಂದು ಕಿವಿಮಾತು ಹೇಳಿದ್ದರು. ನನಗೆ ಮಾನಸಿಕವಾಗಿ ಧೈರ್ಯ ಕೊಟ್ಟಿದ್ದು ರಾಜ್ಕುಮಾರ್. ಅಣ್ಣಾವ್ರ ಆಶೀರ್ವಾದ ನಂತರ ನನ್ನ ಸಿನಿಮಾಗಳು ದೊಡ್ಡ ಮಟ್ಟದಲ್ಲಿ ಹಿಟ್ ಆದವು’ ಎಂದು ರಾಜ್ಕುಮಾರ್ ಸಹಾಯ ನೆನಪಿಸಿಕೊಂಡಿದ್ದರೆ.