ಮಂಗಳೂರು: ಶಿವಮೊಗ್ಗದಲ್ಲಿ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷನ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದ ಮಂಗಳೂರು ಮುಸ್ಲಿಂ ಫೇಸ್ ಬುಕ್ ಪೇಜ್ ವಿರುದ್ಧದ ತನಿಖೆಯನ್ನು ಸಿಐಡಿ ಗೆ ವಹಿಸಲಾಗಿದೆ.
ಮಂಗಳೂರು ನಗರ ಪೊಲೀಸರು ಪ್ರಕರಣದ ತನಿಖೆಯನ್ನು ಕ್ರಿಮಿನಲ್ ಇನ್ವೆಸ್ಟಿಗೇಷನ್ ಇಲಾಖೆ (ಸಿಐಡಿ) ಗೆ ವಹಿಸಿದ್ದು, ಈ ಬಗ್ಗೆ ಮಾಹಿತಿ ನೀಡಿರುವ ನಗರ ಪೊಲೀಸ್ ಆಯುಕ್ತ ಎನ್ ಶಶಿ ಕುಮಾರ್, ಹಿಜಾಬ್ ವಿವಾದದಲ್ಲಿ ವಿಚಾರಣೆ ನಡೆಸುತ್ತಿದ್ದ ಹೈಕೋರ್ಟ್ ನ್ಯಾಯಾಧೀಶರಿಗೆ ಜೀವ ಬೆದರಿಕೆ ಹಾಕಿದ್ದ ಪೋಸ್ಟ್ ಕೂಡಾ ಮಂಗಳೂರು ಮುಸ್ಲಿಂ ಫೇಸ್ ಬುಕ್ ಪೇಜ್ ನಲ್ಲಿ ಕಂಡುಬಂದಿದ್ದು, ಈ ಬಗ್ಗೆ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಈ ಬಳಿಕ ಫೆ.28 ರಂದು ಡಿಜಿಪಿ ಹಾಗೂ ಐಜಿಪಿ ಪ್ರವೀಣ್ ಸೂದ್ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡುವಂತೆ ಆದೇಶಿಸಿದ್ದರು.