ನ್ಯೂಸ್ ನಾಟೌಟ್: ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳೂ ಸೇರಿದಂತೆ ದೇಶದಾದ್ಯ ಇಂದು ನಡೆಯುತ್ತಿದೆ. ಎರಡನೇ ಹಂತದಲ್ಲಿ ಒಟ್ಟು 13 ರಾಜ್ಯಗಳ 89 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಕರ್ನಾಟಕದಲ್ಲಿ ಇದು ಮೊದಲ ಹಂತದ ಮತದಾನವಾಗಿದೆ.
ನೋಟಾಗೆ ಹೆಚ್ಚು ಮತ ಬಂದರೆ ಮರುಚುನಾವಣೆ ನಡೆಸುವ ಬಗ್ಗೆ ಸಲ್ಲಿಕೆಯಾಗಿರುವ ಅರ್ಜಿಯನ್ನು ಗಣನೆಗೆ ತೆಗೆದುಕೊಂಡಿರುವ ಸುಪ್ರೀಂಕೋರ್ಟ್, ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಿದೆ. ಚುನಾವಣೆಯಲ್ಲಿ ನೋಟಾಗೆ ಅತಿ ಹೆಚ್ಚು ಮತ ಬಂದರೆ, ಆ ಕ್ಷೇತ್ರದಲ್ಲಿ ಹೊಸದಾಗಿ ಮರುಚುನಾವಣೆ ನಡೆಸಬೇಕು ಹಾಗೂ ನೋಟಾಗಿಂತ ಕಡಿಮೆ ಮತ ಪಡೆಯುವ ಅಭ್ಯರ್ಥಿಯನ್ನು ಮರು ಚುನಾವಣೆಗೆ ನಿಷೇಧಿಸಬೇಕು. ಚುನಾವಣೆಯಲ್ಲಿ ಸ್ಪರ್ಧಿಸದಂತೆ ಸೂಚಿಸಬೇಕೆಂದು ಕೋರಿ ಅರ್ಜಿ ಸಲ್ಲಿಕೆಯಾಗಿತ್ತು ಎಂದು ವರದಿ ತಿಳಿಸಿದೆ.