ನ್ಯೂಸ್ ನಾಟೌಟ್: ಬೃಹತ್ ಮಾನವ ಕಳ್ಳ ಸಾಗಾಟ ಜಾಲವೊಂದು ಬೆಳಕಿಗೆ ಬಂದಿದೆ. ಬಿಹಾರದಿಂದ ಉತ್ತರಪ್ರದೇಶಕ್ಕೆ ಸಾಗಾಟವಾಗುತ್ತಿದ್ದ 95ಕ್ಕೂ ಅಧಿಕ ಮುಸ್ಲಿಂ ಮಕ್ಕಳನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ.
ಈ ಕುರಿತು ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಸರ್ವೇಶ್ ಅವಸ್ಥಿ ಮಾಹಿತಿ ನೀಡಿದ್ದಾರೆ, ಇವರು ಹೇಳಿರುವ ಪ್ರಕಾರ ಶುಕ್ರವಾರ ಬೆಳಗ್ಗೆ 9 ಗಂಟೆಗೆ ಉತ್ತರಪ್ರದೇಶ ಮಕ್ಕಳ ಹಕ್ಕುಗಳ ಆಯೋಗ ಸದಸ್ಯೆ ಸುಚಿತ್ರಾ ಚತುರ್ವೇದಿ ಕರೆ ಮಾಡಿ, ಬಿಹಾರದಿಂದ ಸಹರಾನ್ ಪುರಕ್ಕೆ ಮಕ್ಕಳನ್ನು ಅಕ್ರಮವಾಗಿ ಸಾಗಾಟ ಆಗುತ್ತಿದೆ. ಮಕ್ಕಳು ಸದ್ಯ ಗೋರಖ್ ಪುರದಲ್ಲಿದ್ದು, ಅಯೋಧ್ಯೆ ಮೂಲಕ ಅವರನ್ನು ಬೇರೆಡೆ ಸಾಗಿಸಾಗುತ್ತಿರುವ ಬಗ್ಗೆ ಮಾಹಿತಿ ನೀಡಿದ್ದರು ಎಂದು ತಿಳಿಸಿದರು.
ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸರ್ವೇಶ್ ಅವಸ್ಥಿ ಪೊಲೀಸರ ಸಹಾಯದಿಂದ ಮಕ್ಕಳ ರಕ್ಷಿಸಿದ್ದು, ಅವರಿಗೆ ಆಹಾರ ಮತ್ತು ಔಷಧ ಪೂರೈಕೆ ಮಾಡಿದ್ದಾರೆ. ಇನ್ನು ಈ ಮಕ್ಕಳು 4-12 ವರ್ಷ ವಯೋಮಿತಿಯವರಾಗಿದ್ದು, ಅವರನ್ನು ಕರೆದುಕೊಂಡು ಬಂದವರ ಬಳಿಕ ಮಕ್ಕಳ ಪೋಷಕರ ಒಪ್ಪಿಗೆ ಪತ್ರವಾಗಲೀ, ಇತರೆ ಯಾವುದೇ ದಾಖಲೆಗಳು ಇರಲಿಲ್ಲ. ಅಷ್ಟೇ ಅಲ್ಲದೇ ಮಕ್ಕಳನ್ನು ಎಲ್ಲಿಗೆ ಸಾಗಿಸಲಾಗುತ್ತಿತ್ತು ಎಂಬ ಬಗ್ಗೆಯೂ ಯಾವುದೇ ಮಾಹಿತಿ ಇಲ್ಲ. ಸದ್ಯ ಮಕ್ಕಳ ರಕ್ಷಿಸಲಾಗಿದ್ದು, ಅವರ ಪೋಷಕರನ್ನು ಸಂಪರ್ಕಿಸಿ ಅವರಿಗೆ ಒಪ್ಪಿಸಲಾಗುತ್ತದೆ ಎಂದು ಸರ್ವೇಶ್ ಹೇಳಿದ್ದಾರೆ.
ಕೆಲವು ದಿನಗಳ ಹಿಂದೆಯಷ್ಟೇ ಬಿಹಾರದಿಂದ ಮಕ್ಕಳ ಗುಂಪೊಂದನ್ನು ವಿವಿಧ ರಾಜ್ಯಗಳ ಮದರಸಾಗಳಿಗೆ ಕಳುಹಿಸಲಾಗಿತ್ತು. ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಗೋರಖ್ ಪುರದಲ್ಲಿ ಮಕ್ಕಳ ಹಕ್ಕುಗಳ ಆಯೋಗದ ಮಕ್ಕಳನ್ನು ರಕ್ಷಿಸಿತ್ತು. ದೇಶದ ಸಂವಿಧಾನ ಮಕ್ಕಳಿಗೆ ಶಿಕ್ಷಣದ ಹಕ್ಕನ್ನು ನೀಡಿದೆ. ಎಲ್ಲಾ ಮಕ್ಕಳು ಕಡ್ಡಾಯವಾಗಿ ಶಾಲೆಗೆ ಹೋಗಲೇಬೇಕು. ಹೀಗಿರುವಾಗಿ ಮಕ್ಕಳನ್ನು ಕಳ್ಳ ಸಾಗಾಟ ಮಾಡಿ ಮದರಸಾಗಳಿಗೆ ಕೊಂಡೊಯ್ದು ಅಲ್ಲಿ ಅವರ ಹೆಸರಿನಲ್ಲಿ ಸಾವಿರಾರು ರೂಪಾಯಿ ದೇಣಿಗೆ ಪಡೆಯುವುದು ಕಾನೂನು ಬಾಹಿರ ಎಂದು ಸರ್ವೇಶ್ ಹೇಳಿದ್ದಾರೆ.