ನ್ಯೂಸ್ ನಾಟೌಟ್: ರಾಸಲೀಲೆ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣನನ್ನು ಉಚ್ಛಾಟನೆ ಮಾಡಲಾಗಿದೆ, ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು, ಯಾರು, ಯಾವಾಗ ಎಲ್ಲಿಗೆ ಹೋಗುತ್ತಾರೆ ಎಂದು ಕಾದು ಕುಳಿತುಕೊಳ್ಳಲಾಗುತ್ತಾ ಎಂದು ಪ್ರಶ್ನಿಸಿದರು.
ಪ್ರಕರಣದ ಗಂಭೀರತೆ ಅರಿತ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ , ಸ್ವತಃ ತಮ್ಮ ಮೊಮ್ಮಗನನ್ನೇ ಪಕ್ಷದಿಂದ ಉಚ್ಛಾಟನೆ ಮಾಡಲು ಆದೇಶಿಸಿದ್ದರು. ಪ್ರಜ್ವಲ್ ರೇವಣ್ಣ ವಿರುದ್ಧ ಗಂಭೀರ ಆರೋಪ ಕೇಳಿಬಂದು, ಹಾಸನದಲ್ಲಿ ರಾಶಿ ರಾಶಿ ವಿಡಿಯೋ ಇರುವ ಪೆನ್ಡ್ರೈವ್ ಹಾದಿ ಬೀದಿಯಲ್ಲಿ ಸಿಕ್ಕಿದ್ದವು. ಈ ವಿಚಾರಕ್ಕೆ ದೊಡ್ಡ ಮಟ್ಟದಲ್ಲಿ ಸಂಚಲನ ಸೃಷ್ಟಿ ಆಗಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬಕ್ಕೂ ಮುಜುಗರ ಉಂಟಾಗಿತ್ತು. ಅಲ್ಲದೆ, ಸ್ವತಃ ಜೆಡಿಎಸ್ ಶಾಸಕರೇ ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮ ಕೈಗೊಳ್ಳಬೇಕು. ಪ್ರಜ್ವಲ್ ರೇವಣ್ಣನ ಜೆಡಿಎಸ್ ಪಕ್ಷದಿಂದಲೇ ಉಚ್ಛಾಟನೆ ಮಾಡಬೇಕು ಎಂದು ಬಂಡಾಯ ಎದ್ದಿದ್ದರು.