ಐವರ್ನಾಡು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಪೋಕ್ಸೋ ಪ್ರಕರಣದಲ್ಲಿ ಬಂಧಿತನಾಗಿದ್ದ ಐವರ್ನಾಡಿನ ಯುವಕನನ್ನು ಜಾಮೀನಿನ ಮೇಲೆ ಬಿಡುಗೊಡೆಗೊಳಿಸಲಾಗಿದೆ.
ಫೆ.27 ರಂದು ಜಾಲ್ಸೂರು ಗ್ರಾಮದ ಪೈಚಾರು ಬಳಿಯ ಪ್ರಸ್ತುತ ಪುತ್ತೂರಿನ ಕಾಲೇಜೊಂದರಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿರುವ ಅಪ್ರಾಪ್ತ ಬಾಲಕಿಯನ್ನು ಪುತ್ತೂರಿನ ಬೀರಮಲೆ ಗುಡ್ಡೆಗೆ ಕರೆದುಕೊಂಡು ಹೋಗಿ ಅವಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಎನ್ನಲಾಗಿದೆ. ಈ ವಿಷಯ ವನ್ನು ತಿಳಿದ ಅಪ್ರಾಪ್ತೆಯ ಪೋಷಕರು ಆರೋಪಿ ರಕ್ಷಿತ್ ನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆ ಪ್ರಕಾರ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಅದೇ ದಿನ ಆರೋಪಿಯನ್ನು ಪುತ್ತೂರು ಐದನೇ ಹೆಚ್ಚುವರಿ ಸೆಶನ್ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿ ಆರೋಪಿಗೆ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿತ್ತು. ಇದೀಗ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ. ಆರೋಪಿಯ ಪರವಾಗಿ ಸುಳ್ಯದ ನ್ಯಾಯವಾದಿಗಳಾದ ಎಂ.ವೆಂಕಪ್ಪ ಗೌಡ, ರಾಜೇಶ್ ಬಿ.ಜಿ., ಶ್ಯಾಮ್ ಪ್ರಸಾದ್ ಎನ್.ಕೆ, ಹಾಗೂ ಮನೋಜ್ ರವರು ವಾದಿಸಿರುತ್ತಾರೆ.