ನ್ಯೂಸ್ ನಾಟೌಟ್: ಹಾಸನ ಸಂಸದ (Hassan MP), ಜೆಡಿಎಸ್ ಮುಖಂಡ ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ತಮ್ಮ ಅಶ್ಲೀಲ ವಿಡಿಯೊ ಎನ್ನಲಾದ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೇ ಮೊದಲ ಬಾರಿಗೆ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ.
ತಾವು ಬೆಂಗಳೂರಿನಲ್ಲಿ ಇಲ್ಲದ ಕಾರಣ ವಿಚಾರಣೆಗೆ ಹಾಜರಾಗಲು 7 ದಿನಗಳ ಕಾಲಾವಕಾಶ ನೀಡಬೇಕು ಎಂದು ಸಿಐಡಿಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಸಂಸದ ಪ್ರಜ್ವಲ್ ರೇವಣ್ಣ, “ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ” (As I am not in Bangalore to attend the enquiry, I have communicated to C.I.D Bangalore through my Advocate. Truth will prevail soon) ಎಂದು ಬರೆದುಕೊಂಡಿದ್ದಾರೆ. ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ವಿಚಾರವಾಗಿ ವಿಚಾರಣೆಗೆ ಹಾಜರಾಗಲು ಗಡುವು ವಿಸ್ತರಣೆ ಮಾಡುವಂತೆ ಪ್ರಜ್ವಲ್ ಪರ ವಕೀಲರಾದ ಅರುಣ್ ಜಿ. ಸಿಐಡಿಗೆ ಪತ್ರ ಬರೆದು ಕೋರಿದ್ದಾರೆ.
ಪ್ರಜ್ವಲ್ ರೇವಣ್ಣ ಅವರು ಖುದ್ದಾಗಿ ಎಸ್ಐಟಿ ಮುಂದೆ ಹಾಜರಾಗಲು ನೀಡಿರುವ ನೋಟಿಸ್ಗೆ ಸಂಬಂಧಿಸಿದಂತೆ, ನನ್ನ ಕಕ್ಷಿದಾರರಾದ ಪ್ರಜ್ವಲ್ ಅವರ ಮನೆಯ ಮೇಲೆ ತಮ್ಮ ಕಚೇರಿಯಿಂದ ಕಳುಹಿಸಿರುವ ನೋಟಿಸ್ ಅಂಟಿಸಲಾಗಿದೆ.