ನ್ಯೂಸ್ ನಾಟೌಟ್: ಮಳೆ ಆಗದೆ ನೀರಿಗಾಗಿ ಎಲ್ಲಿಲ್ಲದ ಸಂಕಷ್ಟ ಎದುರಾಗುತ್ತಿದ್ದು, ಜನರು ಮಳೆಗಾಗಿ ಅವರ ಸಂಪ್ರದಾಯದಂತೆ ಮೈಸೂರಿನ ನಂಜನಗೂಡು ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಮಳೆಗಾಗಿ ಕಪ್ಪೆಗಳಿಗೆ ಮದುವೆ ಮಾಡಿದ್ದಾರೆ.
ರಾಜ್ಯಾದ್ಯಂತ ಇನ್ನೆರಡು ದಿನಗಳು ಒಣಹವೆ ಇರುವ ಸಾಧ್ಯತೆ ಇದೆ. ಏ.2-3ರಂದು ಶುಷ್ಕ ವಾತಾವರಣ ಇದ್ದರೆ, ಏಪ್ರಿಲ್ 4ರಂದು ಚಾಮರಾಜನಗರದಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ತೀವ್ರ ಬಿಸಿಗಾಳಿ ಪರಿಸ್ಥಿತಿಗಳು ಇವೆ. ಬಳ್ಳಾರಿ, ಕಲಬುರಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗಿವೆ.
ಮುಂದಿನ 5 ದಿನಗಳವರೆಗೆ ಕರ್ನಾಟಕದ ಉತ್ತರ ಒಳಭಾಗದಲ್ಲಿ ಬೆಚ್ಚನೆಯ ರಾತ್ರಿಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಿಸಿಲ ತಾಪಕ್ಕೆ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ.