ನ್ಯೂಸ್ ನಾಟೌಟ್: ರಾಜ್ಯದ ವಿವಿಧ ಕಡೆ ಬಿಸಿಲಿನ ಝಳಕ್ಕೆ ಭೂಮಿ ಕೊತಕೊತ ಕುದಿಯುತ್ತಿದೆ. ಕಳೆದ ಕೆಲವು ಗಂಟೆಗಳಲ್ಲಿ ಬಿಸಲಿನಿಂದಾಗಿ ಉಡುಪಿ ಜಿಲ್ಲೆಯಲ್ಲಿ ಓರ್ವ ಹಾಗೂ ರಾಯಚೂರಿನಲ್ಲಿ ಒಟ್ಟು ಐದು ಮಂದಿ ಸಾವಿಗೀಡಾಗಿದ್ದಾರೆ.
ರಾಯಚೂರಿನಲ್ಲಿ 24 ಗಂಟೆಗಳ ಅವಧಿಯಲ್ಲಿ ಐವರು ಮೃತಪಟ್ಟಿದ್ದಾರೆ. ಶಕ್ತಿನಗರದಲ್ಲಿ ಕಾರಿಗೆ ಬೆಂಕಿ ಹೊತ್ತಿಕೊಂಡು ಉರಿದಿದೆ. ಸಿಂಧನೂರು ತಾಲ್ಲೂಕಿನ ಮುಕ್ಕುಂದಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಡಾ ಗ್ರಾಮದಲ್ಲಿ ಗರಿಷ್ಠ ಉಷ್ಠಾಂಶ 45 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಪ್ರಖರ ಬಿಸಿಲು ಹಾಗೂ ನಿರ್ಜಲೀಕರಣದಿಂದ ನಾಲ್ವರು ಮೃಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಉಡುಪಿಯಲ್ಲಿ ವ್ಯಕ್ತಿ ಬಸ್ ಸ್ಟ್ಯಾಂಡ್ ನಲ್ಲಿ ನಿಂತಿರುವಾಗ ಕುಸಿದು ಬಿದ್ದು ಸಾವಿಗೀಡಾಗಿದ್ದಾನೆ.