ನ್ಯೂಸ್ ನಾಟೌಟ್: ಲೈಂಗಿಕ ಹಗರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಸುಪುತ್ರ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಎಲ್ಲ ತಯಾರಿ ನಡೆದಿದೆ. ವಿದೇಶದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಜ್ವಲ್ ರೇವಣ್ಣ ಯಾವುದೇ ಕ್ಷಣದಲ್ಲಿ ಆಗಮಿಸುವ ಸಾಧ್ಯತೆ ಇದೆ. ಬಂದ ತಕ್ಷಣ ಅವರನ್ನು ಅರೆಸ್ಟ್ ಮಾಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸದ್ಯ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್ ಐಟಿ ಒಂದೊಂದೇ ಮಾಹಿತಿಗಳನ್ನು ಸಂತ್ರಸ್ತೆಯರಿಂದ ಕಲೆ ಹಾಕುತ್ತಿದೆ. ಮಾಜಿ ಸಚಿವ ಎಚ್ ಡಿ ರೇವಣ್ಣ ಅವರನ್ನು ಈಗಾಗಲೇ ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಮತ್ತೊಂದು ಕಡೆಯಲ್ಲಿ ವಿದೇಶದಲ್ಲಿರುವ ಪ್ರಜ್ವಲ್ ಗೆ ಬ್ಲೂ ಕಾರ್ನರ್ ನೋಟಿಸ್ ನೀಡಲಾಗಿದೆ. ತನಿಖೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಪ್ರಜ್ವಲ್ ಪೆನ್ ಡ್ರೈ ಪ್ರಕರಣದಲ್ಲಿ ಸುಮಾರು ಎರಡು ಸಾವಿರಕ್ಕೂ ಅಧಿಕ ಮಹಿಳೆಯರ ವಿಡಿಯೋ ಇದೆ ಎಂದು ಈಗಾಗಲೇ ಹೇಳಲಾಗುತ್ತಿದೆ.