ನ್ಯೂಸ್ ನಾಟೌಟ್: ಬೆಂಗಳೂರಿನ ವಿವಿಧ ಕಡೆಗಳಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ರಾತ್ರೋ ರಾತ್ರಿ ಪೋಸ್ಟರ್ಗಳನ್ನು ಅಂಟಿಸಲಾಗಿದೆ. ಕೆಪಿಸಿಸಿ ಕಚೇರಿ, ಲುಲು ಮಾಲ್ ಸೇರಿದಂತೆ ರಸ್ತೆ ಹಾಗೂ ಗಲ್ಲಿ ಗಲ್ಲಿಗಳಲ್ಲಿ ಡಿಕೆ ಶಿವಕುಮಾರ್ ವಿರುದ್ಧದ ಪೋಸ್ಟರ್ಗಳು ಪ್ರತ್ಯಕ್ಷವಾಗಿವೆ. ಅಪರಿಚಿತರು ನಗರದ ವಿವಿಧ ಕಡೆಗಳಲ್ಲಿ ಹೆಣ್ಣು ಮಕ್ಕಳ ಪೋಟೋ ಬಳಸಿ ರಾಜಕೀಯವಾಗಿ ಬಳಸಿಕೊಳ್ಳುವ ರಾಜಕೀಯ ವ್ಯಬಿ*ಚಾರಿ ಡಿಕೆ ಶಿವಕುಮಾರ್ ಎಂದು ಪೋಸ್ಟರ್ ಅಂಟಿಸಿದ್ದಾರೆ.
ಡಿಕೆ ಶಿವಕುಮಾರ್ ಜೊತೆ ಸಿಎಂ ಸಿದ್ದರಾಮಯ್ಯ ಫೋಟೋಗಳನ್ನು ಬಳಕೆ ಮಾಡಲಾಗಿದೆ. ನಿನ್ನೆಯಷ್ಟೇ(ಮೇ.6) ಬಿಜೆಪಿ ಮುಖಂಡ ದೇವರಾಜೇಗೌಡ ಸುದ್ದಿಗೋಷ್ಠಿ ನಡೆಸಿ, ಪೆನ್ಡ್ರೈವ್ ಹಗರಣ ಹಿಂದೆ ಡಿಕೆ ಶಿವಕುಮಾರರ್ ಕೈವಾಡವಿದೆ ಆರೋಪಿಸಿದ್ದರು. ಡಿಕೆ ಶಿವಕುಮಾರ್ ಜೊತೆ ಮಾತನಾಡಿರುವ ಆಡಿಯೋವನ್ನ ಬಿಡುಗಡೆ ಮಾಡಿದ್ದರು.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆಯಾಗಿತ್ತು. ಇದರ ಬೆನ್ನಲ್ಲೇ ರಾತ್ರೋರಾತ್ರಿ ಡಿಕೆ ಶಿವಕುಮಾರ್ ವಿರುದ್ಧದ ಪೋಸ್ಟರ್ಗಳು ನಗರದಲ್ಲಿ ಪ್ರತ್ಯಕ್ಷವಾಗಿವೆ. ಸದ್ಯ ಪೋಸ್ಟರ್ ಅಂಟಿಸಿದವರ ವಿರುದ್ಧ ಪ್ರಕರಣ ದಾಖಲಾಗುವ ಸಾಧ್ಯತೆಯಿದೆ. ಈ ಪೋಸ್ಟರ್ ಅಂಟಿಸಿದ್ದು ಯಾರು ಎಂಬದರ ಬಗ್ಗೆ ತಿಳಿದು ಬಂದಿಲ್ಲ. ಈ ಹಿಂದೆ ಅಂದಿನ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧ ಪೇ ಸಿಎಂ ಎಂದು ಆರೋಪಿಸಿ ರಾತ್ರೋ ರಾತ್ರಿ ಪೋಸ್ಟರ್ಗಳನ್ನು ಬೆಂಗಳೂರು ನಗರದಲ್ಲಿ ಅಂಟಿಸಲಾಗಿತ್ತು. ತಮ್ಮ ವಿರುದ್ಧ ಗಂಭೀರ ಆರೋಪ ಬರುತ್ತಿದ್ದಂತೆ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದರು. ದೇವರಾಜೇಗೌಡ ನನ್ನ ವಿರುದ್ಧ ಹೊರಿಸಿದ ಆರೋಪಗಳು ಶುದ್ಧ ಸುಳ್ಳು. ಇದರ ಹಿಂದೆ ಬಿಜೆಪಿ-ಜೆಡಿಎಸ್ ನಾಯಕರ ಕೈವಾಡವಿದೆ ಎಂದು ಡಿಕೆ ಶಿವಕುಮಾರ್ ಆರೋಪಿಸಿದ್ದರು.