ನ್ಯೂಸ್ ನಾಟೌಟ್: ಆಸ್ಪತ್ರೆ ಬಿಲ್ ಕಟ್ಟಲು ಹಣವಿಲ್ಲ ಎಂದು ಕಾಯಿಲೆ ಬಿದ್ದು ಆಸ್ಪತ್ರೆ ಸೇರಿದ್ದ ಹೆಂಡತಿ ಕತ್ತು ಹಿಸುಕಿ ಪತಿ ಹತ್ಯೆ ಮಾಡಿರುವ ಘಟನೆ ಅಮೆರಿಕದಲ್ಲಿ ವರದಿಯಾಗಿದೆ. ರೋನಿ ವಿಗ್ಸ್ ಎಂಬಾತ ಪತ್ನಿಗೆ ಚಿಕಿತ್ಸೆ ಕೊಡಿಸಿದ್ದಕ್ಕೆ ವೈದ್ಯಕೀಯ ಬಿಲ್ಗಳನ್ನು ಭರಿಸಲು ಸಾಧ್ಯವಿಲ್ಲವೆಂದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ರೋಗಿ ತನ್ನ ಹಾಸಿಗೆಯಲ್ಲಿ ಮಲಗಿದ್ದಾಗ, ಮೊದಲು ಆಕೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಲು ಪತಿ ಮುಂದಾಗಿದ್ದ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ರೋಗಿ ಮೃತಪಟ್ಟಿರುವುದು ಗೊತ್ತಾಗಿದೆ. ನನ್ನ ಪತ್ನಿಯನ್ನು ನಾನೇ ಕೊಂದೆ ಎಂದು ವ್ಯಕ್ತಿ ತಪ್ಪೊಪ್ಪಿಕೊಂಡಿದ್ದಾನೆ. ಮಿಸೌರಿಯ ಇಂಡಿಪೆಂಡೆನ್ಸ್ ನಲ್ಲಿರುವ ಸೆಂಟರ್ ಪಾಯಿಂಟ್ ಮೆಡಿಕಲ್ ಸೆಂಟರ್ನಲ್ಲಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.