ನ್ಯೂಸ್ ನಾಟೌಟ್: ಕಾರುಗಳೆರಡು ಮುಖಾಮುಖಿ ಢಿಕ್ಕಿಯಾಗಿ ಇಬ್ಬರು ಗಾಯಗೊಂಡ ಘಟನೆ ಬಿ.ಸಿ.ರೋಡ್ ನಾರಾಯಣ ಗುರು ವೃತ್ತದ ಬಳಿ ಶುಕ್ರವಾರ(ಮೇ.೧೦) ನಡೆದಿದೆ. ನರಿಕೊಂಬು ನಿವಾಸಿ ಸ್ವಾತಿ ಹಾಗೂ ಮೈರನ್ ಪಾದೆ ನಿವಾಸಿ ಸುನೀಲ್ ಗಾಯಗೊಂಡವರು ಎಂದು ಗುರುತಿಸಲಾಗಿದೆ.
ಅನಿಲ್ ಎಂಬವರು ಅತ್ತಿಗೆ ಸ್ವಾತಿಯವರನ್ನು ಪಂಜಿಕಲ್ಲುವಿನಿಂದ ನರಿಕೊಂಬು ಮನೆಗೆ ಕಾರಿನಲ್ಲಿ ಕರೆದುಕೊಂಡು ಹೋಗುತ್ತಿದ್ದ ಸಂದರ್ಭ ಈ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಸುನೀಲ್ ಪತ್ನಿ ಹಾಗೂ ಕುಟುಂಬದವರ ಜೊತೆ ಕಾರಿನಲ್ಲಿ ದೇವಸ್ಥಾನಕ್ಕೆ ಹೋಗಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಅನಿಲ್ ಅವರ ಕಾರು ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಎರಡು ಕಾರುಗಳ ಮುಂಭಾಗ ಜಖಂಗೊಂಡಿದೆ. ಕೆಲ ಕಾಲ ಟ್ರಾಫಿಕ್ ಜಾಮ್ ಆಗಿತ್ತು. ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಆಗಮಿಸಿದ್ದಾರೆ.
Click 👇