ನ್ಯೂಸ್ ನಾಟೌಟ್: ರೇವಣ್ಣರಂತೆ ಮಾಜಿ ಸಿಎಂ ಎಚ್ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ. ಅವರ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಅವರು ಕೂಡ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಕೇಳಿದ್ದೇವೆ ಎಂದು ಮದ್ದೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕದಲೂರು ಉದಯ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಪೆನ್ಡ್ರೈವ್ ಪ್ರಕರಣದ ಬಳಿಕ ಕುಮಾರಸ್ವಾಮಿ ವಿರುದ್ಧವೂ ದೂರು ಕೊಡಲು ಧೈರ್ಯ ಮಾಡಲಿದ್ದಾರೆ.
ಅವರ ಆಪ್ತರೇ ಹಲವಾರು ಬಾರಿ ಹೇಳಿದ್ದಾರೆ ಎಂದು ಹೇಳಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಲೈಂಗಿಕ ದೌರ್ಜನ್ಯ ಮಾಡಿರುವ ಬಗ್ಗೆ ಕೇಳಿದ್ದೇವೆ. ರಾಧಿಕಾ ಅವರನ್ನ ಪತ್ನಿ ರೀತಿ ಕಾಣುತ್ತಿದ್ದಾರಾ. ಈ ರೀತಿ ಬಹಳಷ್ಟು ನಡೆದಿರಬಹುದು. ಅವರ ಆಪ್ತರೆ ಹಲವಾರು ಬಾರಿ ಹೇಳಿದ್ದಾರೆ. ಕುಮಾರಸ್ವಾಮಿ ಏನು ಸಾಚಾ ಅಲ್ಲ. ಪೆನ್ಡ್ರೈವ್ ಪ್ರಕರಣ ಬಳಿಕ ಕುಮಾರಸ್ವಾಮಿ ವಿರುದ್ಧವೂ ದೂರು ಕೊಡಲು ಧೈರ್ಯ ಮಾಡಲಿದ್ದಾರೆ. ಯಾರಾದರೂ ದೂರು ಕೊಟ್ಟರೆ ಸರ್ಕಾರ ತನಿಖೆ ಮಾಡಲಿದೆ. ಕುಮಾರಸ್ವಾಮಿ ಏನ್ ಸಾಚಾನ, ಮಗಳ ವಯಸ್ಸಿನವರನ್ನ ಪುಸಲಾಯಿಸಿ ಮಗಳು ಹುಟ್ಟಿಸಿ ರೋಡ್ನಲ್ಲಿ ಬಿಟ್ಟಿದ್ದಾರೆ. ಕುಮಾರಸ್ವಾಮಿ ನೀಚ ಕೆಲಸ ಮಾಡಿದ್ದಾರೆ. ಸಿಎಂ ಆಗಿದ್ದವರು ಇಂತಹ ನೀಚ ಕೆಲಸ ಮಾಡುತ್ತಾರ. ಜೀವನದುದ್ದಕ್ಲೂ ಬ್ಲಾಕ್ಮೇಲ್, ಅಪಪ್ರಚಾರ ಮಾಡುತ್ತಾ ಬಂದಿದ್ದಾರೆ. ಬೇರೆಯವರನ್ನ ಮುಳುಗಿಸಿದ್ದೆ ಕುಮಾರಸ್ವಾಮಿ ಸಾಧನೆ. ಇವರ ಮನೆ ಹೆಣ್ಣು ಮಕ್ಕಳು ಮರ್ಯಾದೆ ರೋಡ್ನಲ್ಲಿ ಹರಾಜಾಗಿದ್ದರೆ ಪ್ರತಿಭಟನೆ ಮಾಡ್ತಿದ್ರಾ ಸ್ವಂತಕ್ಕೆ ಬೇಕಾಗಿರೋದನ್ನ ಮಾತ್ರ ಕುಮಾರಸ್ವಾಮಿ ಮಾಡ್ತಿದ್ದಾರೆ ಎಂದು ಹೇಳಿದ್ದಾರೆ. ಯಾವ ಘನಕಾರ್ಯ ಮಾಡಿದ್ದಾರೆಂದು ಜೆಡಿಎಸ್ನವರು ಪ್ರತಿಭಟನೆ ಮಾಡುತ್ತಿದ್ದಾರೆ. ಬಹಳಷ್ಟು ಜನ ಹೆಣ್ಣು ಮಕ್ಕಳಿಗೆ ಅನ್ಯಾಯವಾಗಿದೆ. ಸಂತ್ರಸ್ತೆಯರ ಪರ ಯಾವ ಜೆಡಿಎಸ್ ನಾಯಕರು ಧ್ವನಿ ಎತ್ತಿಲ್ಲ. ಅವರಿಗೆ ಧೈರ್ಯ ಹೇಳಿ, ಸಾಂತ್ವನ ಹೇಳುವ ಕೆಲಸ ಮಾಡಲಿಲ್ಲ. ಯಾವ ನೈತಿಕತೆ ಇಟ್ಟುಕೊಂಡು ಜೆಡಿಎಸ್ ಪ್ರತಿಭಟನೆ ಮಾಡುತ್ತಿದೆ ಎಂದು ಕುಮಾರಸ್ವಾಮಿ ವಿರುದ್ಧ ಮಾತನಾಡಿದ್ದಾರೆ.
Click 👇