ನ್ಯೂಸ್ ನಾಟೌಟ್: ಆದಾಯ ತೆರಿಗೆ ಇಲಾಖೆಯಲ್ಲಿ (Income Tax Department) ದಿಢೀರನೆ ಬೆಂಕಿ ಕಾಣಿಸಿಕೊಂಡು ಆದಾಯ ತೆರಿಗೆ ಕಚೇರಿಯ ಸೂಪರಿಂಟೆಂಡೆಂಟ್ ಆಗಿದ್ದ ವ್ಯಕ್ತಿ ಉಸಿರುಗಟ್ಟಿ ಸ್ಥಳದಲ್ಲಿಯೇ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದ ಘಟನೆ ದೆಹಲಿಯಲ್ಲಿ ನಡೆದಿದೆ. ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಅವರನ್ನು ಆಸ್ಪತ್ರೆಗೆ ಸೇರಿಸಿದ್ದು, ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.
ದೆಹಲಿಯ ಆದಾಯ ತೆರಿಗೆ ಕಚೇರಿ ಕಟ್ಟಡದ ಮೂರನೇ ಮಹಡಿಯಲ್ಲಿ ಇಂದು ಬೆಂಕಿ ಕಾಣಿಸಿಕೊಂಡು ವ್ಯಕ್ತಿಯೊಬ್ಬರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಕಚೇರಿಯ ಸೂಪರಿಂಟೆಂಡೆಂಟ್ ಆಗಿದ್ದ 46 ವರ್ಷದ ವ್ಯಕ್ತಿ ಘಟನಾ ಸ್ಥಳದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡುಬಂದರು. ನಂತರ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಇಂದು ಮಧ್ಯಾಹ್ನ 2.38ಕ್ಕೆ ಬೆಂಕಿ ದುರಂತದ ಬಗ್ಗೆ ಫೋನ್ ಬಂದ ನಂತರ 21 ಅಗ್ನಿಶಾಮಕ ವಾಹನಗಳು ದುರಂತ ನಡೆದ ಸ್ಥಳಕ್ಕೆ ಧಾವಿಸಿವೆ. ಶೀಘ್ರದಲ್ಲೇ ಬೆಂಕಿಯನ್ನು ಹತೋಟಿಗೆ ತರಲಾಗಿದ್ದು, ಈಗಾಗಲೇ 7 ಮಂದಿಯನ್ನು ಘಟನಾ ಸ್ಥಳದಿಂದ ರಕ್ಷಿಸಲಾಗಿದೆ. ಕಚೇರಿ ಸೂಪರಿಂಟೆಂಡೆಂಟ್ ಆಗಿ ಕೆಲಸ ಮಾಡುತ್ತಿದ್ದ 46 ವರ್ಷದ ವ್ಯಕ್ತಿ ಮೃತಪಟ್ಟಿದ್ದು, ಬೆಂಕಿ ಹೊತ್ತಿಕೊಂಡ ಕಟ್ಟಡದಿಂದ 7 ಜನರನ್ನು ರಕ್ಷಿಸಲಾಗಿದೆ.
Click 👇